ಸಾನಿಯಾ ಮಿರ್ಜಾ-ಹಿಂಗಿಸ್ ಸೆಮೀಸ್‍ಗೆ
ಸ್ವಿಸ್ ಆಟಗಾರ್ತಿ ಮಾರ್ಟಿನಾ ಹಿಂಗಿಸ್ ಜತೆಗಿನ ತನ್ನ ಗೆಲುವಿನ ಯಾನವನ್ನು ಮುಂದುವರೆಸಿರುವ ಭಾರತದ ಟೆನಿಸ್ ತಾರೆ ಸಾನಿಯಾ ಮಿರ್ಜಾ ಚೀನಾ ಓಪನ್ ಟೆನಿಸ್...

Published On :
ಬೀಜಿಂಗ್: ಸ್ವಿಸ್ ಆಟಗಾರ್ತಿ ಮಾರ್ಟಿನಾ ಹಿಂಗಿಸ್ ಜತೆಗಿನ ತನ್ನ ಗೆಲುವಿನ ಯಾನವನ್ನು ಮುಂದುವರೆಸಿರುವ ಭಾರತದ ಟೆನಿಸ್ ತಾರೆ ಸಾನಿಯಾ ಮಿರ್ಜಾ ಚೀನಾ ಓಪನ್ ಟೆನಿಸ್ ಪಂದ್ಯಾವಳಿಯಲ್ಲಿ ಸೆಮಿಫೈನಲ್ ತಲುಪಿದ್ದಾರೆ.
ವರ್ಷದ ಎಂಟನೇ ಡಬ್ಲ್ಯೂಟಿಎ ಪ್ರಶಸ್ತಿಗಾಗಿ ಹೋರಾಡು ತ್ತಿರುವ ಇಂಡೋಸ್ವಿಸ್ ಜೋಡಿ, ಗುರುವಾರ ನಡೆದ ಮಹಿಳೆಯರ ಡಬಲ್ಸ್ ವಿಭಾಗದ ಕ್ವಾರ್ಟರ್ ಫೈನಲ್ ನಲ್ಲಿ ಜರ್ಮನ್ಜೆಕ್ ಜೋಡಿಯಾದ ಜುಲಿಯಾ ಜಾರ್ಜಸ್ ಮತ್ತು ಕರೋಲಿನಾ ಪ್ಲಿಸ್ಕೋವಾ ವಿರುದ್ಧ 76 (5), 64 ಸೆಟ್‍ಗಳ ಅಂತರದಲ್ಲಿ ಜಯ ಸಾಧಿಸಿ ಉಪಾಂತ್ಯಕ್ಕೆ ಲಗ್ಗೆ ಹಾಕಿದರು. 1 ತಾಸು, 19 ನಿಮಿಷಗಳ ಕಾಲ ನಡೆದ ಸೆಣಸಾಟದಲ್ಲಿ ಸಾನಿಯಾಹಿಂಗಿಸ್ ಮೊದಲ ಸೆಟ್‍ನಲ್ಲಿ ತೀವ್ರ ಪ್ರತಿಸ್ಪರ್ಧೆ ಎದುರಿಸಿದರೂ, ಎರಡನೇ ಸೆಟ್‍ನಲ್ಲಿ ಸುನಾಯಾಸವಾಗಿ ಜಯ ಸಾಧಿಸಿದರು.
ಇದೇ ಮಾರ್ಚ್ ಮಾಸದಲ್ಲಿ ಜತೆಯಾದ ಸಾನಿಯಾ ಹಾಗೂ ಹಿಂಗಿಸ್ ಜೋಡಿ ವಿಶ್ವ ಡಬ್ಲ್ಯೂ ರ್ಯಾಂಕಿಂಗ್ ಪಟ್ಟಿಯಲ್ಲಿ ನಂ.1 ಸ್ಥಾನಕ್ಕೇರಿದ್ದೂ ಅಲ್ಲದೆ, ಈ ಋತುವಿನಲ್ಲಿ ವಿಂಬಲ್ಡನ್, ಯುಎಸ್ ಓಪನ್ ಗ್ರಾಂಡ್‍ಸ್ಲಾಮ್ ಪ್ರಶಸ್ತಿಗಳನ್ನೂ ಒಳಗೊಂಡಂತೆ ಈಗಾ ಗಲೇ 7 ಪ್ರಶಸ್ತಿಗಳನ್ನು ಜಯಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


