ಇಂದೋರ್ ನಲ್ಲಿ ಭಾರತಕ್ಕೆ ದಕ್ಷಿಣ ಆಫ್ರಿಕಾ ವಿರುದ್ಧ ಗೆಲುವು
ಪ್ರವಾಸಿ ದಕ್ಷಿಣ ಆಫ್ರಿಕಾ ತಂಡವು ಭಾರತ ಪ್ರವಾಸ ಪ್ರಾರಂಭವಾದಾಗಿನಿಂದ ಸೋಲಿನ ಮುಖವನ್ನೇ ಕಾಣುತ್ತಿದ್ದ ಧೋನಿ ಪಡೆ...

ಇಂದೋರ್: ಪ್ರವಾಸಿ ದಕ್ಷಿಣ ಆಫ್ರಿಕಾ ತಂಡವು ಭಾರತ ಪ್ರವಾಸ ಪ್ರಾರಂಭವಾದಾಗಿನಿಂದ ಸೋಲಿನ ಮುಖವನ್ನೇ ಕಾಣುತ್ತಿದ್ದ ಧೋನಿ ಪಡೆ ಕೊನೆಗೂ ಗೆಲುವಿನ ನಗೆ ಬೀರಿದೆ.
ಇಂದೋರ್ ನ ಹೋಲ್ಕರ್ ಸ್ಟೇಡಿಯಂನಲ್ಲಿ ಬುಧವಾರ ನಡೆದ ಎರಡನೇ ಏಕದಿನ ಪಂದ್ಯವನ್ನು ಭಾರತ ದಕ್ಷಿಣ ಆಫ್ರಿಕಾವನ್ನು 22 ರನ್ನುಗಳಿಂದ ಸೋಲಿಸುವ ಮೂಲಕ ಜಯ ಸಾಧಿಸಿತು. ಈ ಮೂಲಕ ಕಾನ್ಪುರದಲ್ಲಿ ನಡೆದಿದ್ದ ಮೊದಲ ಏಕದಿನ ಪಂದ್ಯದಲ್ಲಿ ಅನುಭವಿಸಿದ್ದ ಸೋಲಿಗೆ ಪ್ರತೀಕಾರ ತೀರಿಸಿಕೊಳ್ಳುವ ಮೂಲಕ ಸರಣಿಯಲ್ಲಿ 1-1 ಸಮಬಲ ಸಾಧಿಸಿತು.
ಭಾರತದ ಇಂದಿನ ಪಂದ್ಯಕ್ಕೆ ಆಸರೆಯಾಗಿದ್ದು ನಾಯಕ ಮಹೇಂದ್ರ ಸಿಂಗ್ ಧೋನಿ. ಟೀಂ ಇಂಡಿಯಾ ನೀಡಿದ 247 ರನ್ನುಗಳ ಸಾಧಾರಣ ಸವಾಲನ್ನು ಬೆನ್ನತ್ತಲು ವಿಫಲವಾದ ದಕ್ಷಿಣ ಆಫ್ರಿಕಾ 43.4 ಓವರುಗಳಲ್ಲಿ 225 ರನ್ನುಗಳಿಗೆ ಆಲೌಟ್ ಆಗುವ ಮೂಲಕ 22 ರನ್ನುಗಳಿಂದ ಸೋಲನುಭವಿಸಿತು.
ನಾಯಕ ಧೋನಿ (ಅಜೇಯ 92) ಮತ್ತು ಅಜಿಂಕ್ಯ ರಹಾನೆ (51) ಅವರ ಜವಾಬ್ದಾರಿಯುತ ಬ್ಯಾಟಿಂಗ್ ನೆರವಿನಿಂದ ನಿಗದಿತ 50 ಓವರುಗಳಲ್ಲಿ 247 ರನ್ನುಗಳ ಸಾಧಾರಣ ಮೊತ್ತವನ್ನು ಪೇರಿಸಿತು. ಟೈಲ್ ಎಂಡ್ ನಲ್ಲಿ ಹರ್ಭಜನ್ ಸಿಂಗ್ ಬಿರುಸಿನ ಆಟವಾಡಿದರು ಅವರ ಗಳಿಕೆ 22 ಎಸೆತೆಗಳಲ್ಲಿ 22 ರನ್ನುಗಳು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


