ಕ್ರೀಡೆ

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವೇಗಿ ಜಹೀರ್ ಖಾನ್ ವಿದಾಯ

2011ರ ವಿಶ್ವಕಪ್ ಗೆದ್ದ ಟೀಂ ಇಂಡಿಯಾ ತಂಡದಲ್ಲಿದ್ದ ಪ್ರಮುಖ ವೇಗಿ ಜಹೀರ್ ಖಾನ್ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ್ದಾರೆ...

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವೇಗಿ ಜಹೀರ್ ಖಾನ್ ವಿದಾಯ
ಜಹೀರ್ ಖಾನ್
Published On :

ನವದೆಹಲಿ: 2011ರ ವಿಶ್ವಕಪ್ ಗೆದ್ದ ಟೀಂ ಇಂಡಿಯಾ ತಂಡದಲ್ಲಿದ್ದ ಪ್ರಮುಖ ವೇಗಿ ಜಹೀರ್ ಖಾನ್ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ್ದಾರೆ.

ಅನುಭವಿ ಆಟಗಾರರಾಗಿದ್ದ ಜಹೀರ್ ಖಾನ್ ಗಾಯದ ಸಮಸ್ಯೆಯಿಂದ ಕಳೆದ ಮೂರು ವರ್ಷಗಳಿಂದ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆಯಲು ವಿಫಲರಾಗಿದ್ದರು. ಈ ಮಧ್ಯೆ ಟೀಂ ಇಂಡಿಯಾದಲ್ಲಿ ಯುವ ಪ್ರತಿಭೆಗಳು ಸ್ಥಾನ ಪಡೆಯುತ್ತಿರುವುದರಿಂದ ಜಹೀರ್ ಖಾನ್ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ್ದಾರೆ.

ಇದಕ್ಕೂ ಮುಂಚೆ ಜಹೀರ್ ಖಾನ್ ಇಂದು ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಘೋಷಿಸಲಿದ್ದಾರೆ ಎಂದು ಐಪಿಎಲ್ ಅಧ್ಯಕ್ಷ ರಾಜೀವ್ ಶುಕ್ಲ ಟ್ವೀಟ್ ಮಾಡಿದ್ದರು.

ಜಹೀರ್ ಖಾನ್ ತಮ್ಮ 16 ವರ್ಷಗಳ ವೃತ್ತಿ ಬದುಕಿನಲ್ಲಿ 200 ಏಕದಿನ ಪಂದ್ಯಗಳನ್ನು ಆಡಿದ್ದು, 282 ವಿಕೆಟ್ ಗಳನ್ನು ಪಡೆದಿದ್ದಾರೆ. 92 ಟೆಸ್ಟ್ ಪಂದ್ಯಗಳನ್ನು ಆಡಿರುವ ಅವರು 311 ವಿಕೆಟ್ ಗಳಿಸಿದ್ದಾರೆ.

ಅಕ್ಟೋಬರ್ 3, 2000ರಂದು ಕೀನ್ಯಾ ವಿರುದ್ಧದ ಪಂದ್ಯದ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ ಬದುಕಿಗೆ ಪಾದಾರ್ಪಣೆ ಮಾಡಿದರು. ಇದೇ ವರ್ಷ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಟೆಸ್ಟ್ ಕ್ರಿಕೆಟ್ ಆಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.