ಭಾರತ ಕಿರಿಯರಿಗೆ ಹ್ಯಾಟ್ರಿಕ್ ಜಯ
ಹಾಲಿ ಚಾಂಪಿಯನ್ ಆಗಿ ಕಣಕ್ಕಿಳಿದು ಅತ್ಯದ್ಭುತ ಪ್ರದರ್ಶನ ನೀಡುತ್ತಿರುವ 21 ವರ್ಷದೊಳಗಿನ ಭಾರತ ಹಾಕಿ ತಂಡ ಸುಲ್ತಾನ್ ಜೋಹರ್ ಕಪ್ ಹಾಕಿ ಟೂರ್ನಿಯಲ್ಲಿ...

Published On :
ಜೋಹರ್ ಬಹ್ರು: ಹಾಲಿ ಚಾಂಪಿಯನ್ ಆಗಿ ಕಣಕ್ಕಿಳಿದು ಅತ್ಯದ್ಭುತ ಪ್ರದರ್ಶನ ನೀಡುತ್ತಿರುವ 21 ವರ್ಷದೊಳಗಿನ ಭಾರತ ಹಾಕಿ ತಂಡ ಸುಲ್ತಾನ್ ಜೋಹರ್ ಕಪ್ ಹಾಕಿ ಟೂರ್ನಿಯಲ್ಲಿ ಸತತ ಮೂರನೇ ಜಯ ಸಂಪಾದಿಸಿದೆ.
ಗುರುವಾರ ನಡೆದ ಪಂದ್ಯದಲ್ಲಿ ಭಾರತ ತಂಡ 2-1 ಗೋಲುಗಳ ಅಂತರದಲ್ಲಿ ಆತಿಥೇಯ ಮಲೇಷಿಯಾ ತಂಡವನ್ನು ಮಣಿಸಿತು. ಆ ಮೂಲಕ ಟೂರ್ನಿಯಲ್ಲಿ ಹ್ಯಾಟ್ರಿಕ್ ಜಯ ದಾಖಲಿಸಿತು. ಭಾರತ ತಂಡದ ಪರ ಆಕರ್ಷಕ ಪ್ರದರ್ಶನ ನೀಡಿದ ಹರ್ಮನ್ ಪ್ರೀತ್ ಸಿಂಗ್ 41 ಮತ್ತು 56ನೇ ನಿಮಿಷದಲ್ಲಿ ಗೋಲು ದಾಖಲಿಸಿ ತಂಡಕ್ಕೆ ಗೆಲವು ತಂದುಕೊಟ್ಟರು.
ಇನ್ನು ಮಲೇಷಿಯಾ ತಂಡದ ಪರ ಶಹ್ರಿಲ್ ಶಾಬ 68ನೇ ನಿಮಿಷದಲ್ಲಿ ಏಕಾಂಗಿ ಗೋಲು ದಾಖಲಿಸಿದರು. ಭಾನುವಾರ ನಡೆದಿದ್ದ ಆರಂಭಿಕ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ, ಬುಧವಾರ ಅರ್ಜೆಂಟೀನಾ ವಿರುದ್ಧ ಗೆದ್ದಿದ್ದ ಭಾರತ, ಈ ಪಂದ್ಯದಲ್ಲೂ ಜಯಿಸಿ 9 ಅಂಕಗಳನ್ನು ಸಂಪಾದಿಸುವ ಮೂಲಕ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಪಡೆಯಿತು. ಆ ಮೂಲಕ ಗ್ರೇಟ್ ಬ್ರಿಟನ್ (8) ಮತ್ತು ಅರ್ಜೆಂಟೀನಾ (7) ತಂಡಗಳನ್ನು ಹಿಂದಿಕ್ಕಿತು. ಪಂದ್ಯದ ಆರಂಭದಲ್ಲಿ ಉಭಯ ತಂಡಗಳು ಪರಸ್ಪರ ಹೋರಾಟ ನಡೆಸಿದವು. ಹಾಗಾಗಿ ಪಂದ್ಯದ ಮೊದಲಾರ್ಧ ಮುಕ್ತಾಯದ ವೇಳೆ ಗೋಲುರಹಿತ ಸಮಬಲ ಕಂಡುಬಂದಿತು. ಆದರೆ ಪಂದ್ಯದ ದ್ವಿತೀಯಾರ್ಧದಲ್ಲಿ ಹರ್ಮನ್‍ಪ್ರೀತ್ ಸಿಂಗ್ ಅವರ ಚುರುಕಿನ ಆಟ ತಂಡಕ್ಕೆ ವಿಜಯ ತಂದುಕೊಟ್ಟಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


