ಒಲಿಂಪಿಕ್ಸ್ ಕ್ರಿಕೆಟ್ಗೆ ಸಚಿನ್-ವಾರ್ನ್ ಬ್ಯಾಟ್
ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಕ್ರಿಕೆಟ್ ಕ್ರೀಡೆಯನ್ನು ಮತ್ತೆ ಸೇರ್ಪಡೆಗೊಳಿಸಬೇಕೆಂಬ ಕೂಗಿಗೆ ಮಾಜಿ ಕ್ರಿಕೆಟಿಗರಾದ ಸಚಿನ್ ತೆಂಡೂಲ್ಕರ್...

ನವದೆಹಲಿ: ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಕ್ರಿಕೆಟ್ ಕ್ರೀಡೆಯನ್ನು ಮತ್ತೆ ಸೇರ್ಪಡೆಗೊಳಿಸಬೇಕೆಂಬ ಕೂಗಿಗೆ ಮಾಜಿ ಕ್ರಿಕೆಟಿಗರಾದ ಸಚಿನ್ ತೆಂಡೂಲ್ಕರ್ ಹಾಗೂ ಶೇನ್ ವಾರ್ನ್ ದನಿಗೂಡಿಸಿದ್ದಾರೆ.
ಒಲಿಂಪಿಕ್ಸ್ನಲ್ಲಿ ಟಿ20 ಮಾದರಿ ಕ್ರಿಕೆಟನ್ನು ಸೇರ್ಪಡೆಗೊಳಿಸಲು ಅಂತಾರಾಷ್ಟ್ರೀಯ ಕ್ರಿಕೆಟ್ ಸಂಸ್ಥೆ (ಐಸಿಸಿ) ಒಲವು ತೋರಿದ್ದು, ಈ ಕುರಿತಂತೆ ಐಸಿಸಿ ಹಾಗೂ ಅಂತಾರಾಷ್ಟ್ರೀಯ ಒಲಂಪಿಕ್ಸ್ ಸಂಸ್ಥೆ (ಐಒಸಿ) ಅಧಿಕಾರಿಗಳ ನಡುವೆ ಶೀಘ್ರದಲ್ಲೇ ಮಾತುಕತೆ ನಡೆಯಲಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಸಚಿನ್, ವಾರ್ನ್, ಒಲಿಂಪಿಕ್ಸ್ ನಲ್ಲಿ ಕ್ರಿಕೆಟ್ ಸೇರ್ಪಡೆಯಿಂದ ಕ್ರಿಕೆಟ್ ಇನ್ನಷ್ಟು ಜನಪ್ರಿಯವಾಗುತ್ತದೆ. ಬೆಳವಣಿಗೆಗೆ ಸಹಕಾರಿಯಾಗುತ್ತದೆ ಎಂದಿದ್ದಾರೆ. 1900ರ ಒಲಿಂಪಿಕ್ಸ್ ನ ನಂತರ ಕ್ರಿಕೆಟ್ ಅನ್ನು ಮಹಾಕ್ರೀಡಾಕೂಟದಿಂದ ಕೈಬಿಡಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


