ರಿವರ್ಸ್ ಬಿಡ್ಡಿಂಗ್ ಪ್ರಕ್ರಿಯೆಗೆ ಮೊರೆಹೋಗಲು ಬಿಸಿಸಿಐ ಚಿಂತನೆ
ಇಂಡಿಯನ್ ಸೂಪರ್ ಲೀಗ್ ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಜಸ್ತಾನ್ ರಾಯನ್ಸ್ ತಂಡವನ್ನು ವಜಾ ಗೊಳಿಸಿರುವ ಹಿನ್ನೆಲೆಯಲ್ಲಿ ...

Published On :
ನವದೆಹಲಿ: ಇಂಡಿಯನ್ ಸೂಪರ್ ಲೀಗ್ ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಜಸ್ತಾನ್ ರಾಯನ್ಸ್ ತಂಡವನ್ನು ವಜಾ ಗೊಳಿಸಿರುವ ಹಿನ್ನೆಲೆಯಲ್ಲಿ ಹೊಸ ಎರಡು ತಂಡಗಳ ಸೇರ್ಪಡೆಗೆ ಬಿಸಿಸಿಐ ಸಿದ್ಧತೆ ನಡೆಸುತ್ತಿದೆ. ಆದಾಗ್ಯೂ ನೂತನ ತಂಡಗಳ ಸೇರ್ಪಡೆಗಾಗಿ ರಿವರ್ಸ್ ಬಿಡ್ಡಿಂಗ್ ಪ್ರಕ್ರಿಯೆಗೆ ಮೊರೆ ಹೋಗಲು ಭಾರತೀಯ ಕ್ರಿಕೆಟ್ ಮಂಡಳಿ ಚಿಂತನೆ ನಡೆಸುತ್ತಿದೆ.
ಬಿಸಿಸಿಐ ಎಲ್ಲಾ ಫ್ರಾಂಚೈಸಿಗಳಿಗೆ ಮೂಲಬೆಲೆಯನ್ನು ನಿಗದಿ ಪಡಿಸುವುದು. ಆಸಕ್ತ ಫ್ರಾಂಚೈಸಿಗಳು ಆ ಬೆಲೆಗಿಂತ ಕಡಿಮೆ ಬೆಲೆಯಲ್ಲಿ ಹರಾಜು ಕೂಗಿ, ಕಡಿಮೆ ಹರಾಜುಬೆಲೆಗೆ ತಂಡಗಳನ್ನು ನೀಡಲಾಗುವುದು.
ರಿವರ್ಸ್ ಬಿಡ್ಡಿಂಗ್ ಎಂಬ ಹೊಸ ಪ್ರಕ್ರಿಯೆ ಹೆಚ್ಚಿನ ಜನರನ್ನು ಆಕರ್ಷಿಸಲಿದೆ ಎಂದು ಬಿಸಿಸಿಐ ಹೇಳಿದೆ.
ರಾಜಸ್ತಾನ್ ರಾಯಲ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ಬದಲಿಗೆ ಸೇರ್ಪಡೆಯಾಗುವ ತಂಡಗಳನ್ನು ಎರಡು ವರ್ಷಗಳ ಅವಧಿಗೆ ಮಾರಾಟ ಮಾಡಲಾಗುವುದು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


