ತಂಬಾಕು, ಮದ್ಯದ ಜಾಹಿರಾತಿನಲ್ಲಿ ಸಚಿನ್ ಕಾಣಿಸಿಕೊಂಡಿಲ್ಲ ಯಾಕೆ ಗೊತ್ತಾ?
ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹಲವಾರು ಜಾಹೀರಾತುಗಳಲ್ಲಿ ಕಾಣಿಸಿಕೊಂಡಿದ್ದಾರೆ ಆದರೆ ಎಂದಿಗೂ ತಂಬಾಕು ಉತ್ಪನ್ನ, ಮದ್ಯದ ಜಾಹೀರಾತುಗಳಲ್ಲಿ ಎಂದಿಗೂ ಕಾಣಿಸಿಕೊಂಡಿಲ್ಲ.

ಕೊಚ್ಚಿ: ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹಲವಾರು ಜಾಹೀರಾತುಗಳಲ್ಲಿ ಕಾಣಿಸಿಕೊಂಡಿದ್ದಾರೆ ಆದರೆ ಎಂದಿಗೂ ತಂಬಾಕು ಉತ್ಪನ್ನ, ಮದ್ಯದ ಜಾಹೀರಾತುಗಳಲ್ಲಿ ಎಂದಿಗೂ ಕಾಣಿಸಿಕೊಂಡಿಲ್ಲ. ಸ್ವತಃ ಸಚಿನ್ ತೆಂಡೂಲ್ಕರ್ ಇದಕ್ಕೆ ಕಾರಣ ತಿಳಿಸಿದ್ದಾರೆ.
ಅಂತರಾಷ್ಟ್ರೀಯ ಜಾಹೀರಾತು ಸಂಘ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಸಚಿನ್ "ನಾನು ಎಂದಿಗೂ ಮದ್ಯ ಹಾಗೂ ತಂಬಾಕು ಉತ್ಪನ್ನಗಳನ್ನು ಉತೇಜಿಸುವ ಜಾಹೀರಾತುಗಳಲ್ಲಿ ನಟಿಸಿಲ್ಲ ಎಂದು ಹೇಳಿದ್ದಾರೆ.
ಮದ್ಯ, ತಂಬಾಕು ಉತ್ಪನ್ನಗಳನ್ನು ಉತ್ತೇಜಿಸದಂತೆ ನನ್ನ ತಂದೆ ನನಗೆ ಹೇಳಿದ್ದರು ಆದ್ದರಿಂದ ಅವೆರಡನ್ನೂ ಉತ್ತೇಜಿಸುವ ಜಾಹೀರಾತನ್ನು ಎಂದಿಗೂ ಮಾಡುವುದಿಲ್ಲ ಎಂದು ಸಚಿನ್ ತಿಳಿಸಿದ್ದಾರೆ. ತಮ್ಮ ಗುರಿ ತಲುಪುವವರೆಗೆ ವಿಶ್ರಮಿಸದೇ ಇರಲು ಯುವಜನತೆಗೆ ಇದೇ ಕಾರ್ಯಕ್ರಮದಲ್ಲಿ ಸಚಿನ್ ತೆಂಡೂಲ್ಕರ್ ಕರೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


