ಜಗಮೋಹನ್ ದಾಲ್ಮಿಯಾ ಅವರ ಆರೋಗ್ಯ ಸ್ಥಿರ
ಬಿಸಿಸಿಐ ಅಧ್ಯಕ್ಷ ಜಗಮೋಹನ್ ದಾಲ್ಮಿಯಾ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ...

ಕೊಲ್ಕೋತಾ: ಬಿಸಿಸಿಐ ಅಧ್ಯಕ್ಷ ಜಗಮೋಹನ್ ದಾಲ್ಮಿಯಾ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ತೀವ್ರ ಎದೆ ನೋವಿಗೆ ಒಳಗಾಗಿದ್ದ 75 ವರ್ಷದ ದಾಲ್ಮಿಯಾ ಅವರನ್ನು ಗುರುವಾರ ರಾತ್ರಿ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಕರೋನರಿ ಆರ್ಟರಿ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು.
ಜಗಮೋಹನ್ ದಲ್ಮಿಯಾ ಅವರು ಸದ್ಯ ಚೇತರಿಸಿಕೊಳ್ಳುತ್ತಿದ್ದು, ಅವರ ಮೇಲೆ ತೀವ್ರ ನಿಗಾ ಇಡಲಾಗಿದೆ, ಕಳೆದ ರಾತ್ರಿ ಅವರಿಗೆ ಕರೋನರಿ ಎಂಜಿಯೋಗ್ರಫಿ ಮಾಡಿದ್ದು, ರಕ್ತ ಹೆಪ್ಪುಗಟ್ಟದಂತೆ ಚಿಕಿತ್ಸೆ ನೀಡಲಾಗಿದೆ ವೈದ್ಯರು ತಿಳಿಸಿದ್ದಾರೆ. ಗುರುವಾರ ರಾತ್ರಿ ದಾಲ್ಮಿಯಾ ಅವರಿಗೆ ಹಠಾತನೇ ಎದೆ ನೋವು ಕಾಣಿಸಿಕೊಂಡ ಕಾರಣ ಕರೋನರಿ ಎಂಜಿಯೋಗ್ರಫಿಗಾಗಿ ಬಿಎಂ ಬಿರ್ಲಾ ಹೃದಯ ಸಂಶೋಧನಾ ಕೇಂದ್ರಕ್ಕೆ ದಾಖಲಿಸಲಾಗಿತ್ತು. ದಾಲ್ಮಿಯಾ ಅವರು ಎದೆ ನೋವಿಗೆ ತುತ್ತಾದ ಕೂಡಲೇ ಅವರನ್ನು ಅವರ ಕುಟುಂಬಸ್ಥರು ಆಸ್ಪತ್ರೆಗೆ ಸೇರಿಸಿದ್ದರು.
ಭಾರತ ತಂಡದ ಮಾಜಿ ನಾಯಕ ಹಾಗೂ ಬಂಗಾಳ ಕ್ರಿಕೆಟ್ ಸಂಸ್ಥೆಯ ಜಂಟಿ ಕಾರ್ಯದರ್ಶಿ ಸೌರವ್ ಗಂಗೂಲಿ, ಆಸ್ಪತ್ರೆಗೆ ಭೇಟಿ ನೀಡಿ ದಾಲ್ಮಿಯಾ ಅವರ ಆರೋಗ್ಯ ವಿಚಾರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


