ಬಿಸಿಸಿಐ ಅಧ್ಯಕ್ಷ ಗಾದಿಗಾಗಿ ಮುಂದುವರೆದ ಶ್ರೀನಿ ಪ್ರಯತ್ನ..?
ಜಗಮೋಹನ್ ದಾಲ್ಮಿಯಾ ಅವರ ಸಾವಿನಿಂದ ತೆರವಾಗಿರುವ ಬಿಸಿಸಿಐ ಅಧ್ಯಕ್ಷಗಾದಿ ಮೇಲೆ ಕಣ್ಣಿಟ್ಟಿರುವ ಮಾಜಿ ಅಧ್ಯಕ್ಷ ಎನ್.ಶ್ರೀನಿವಾಸನ್ ಮತ್ತೆ ತಮ್ಮ ಪ್ರಯತ್ನ ಮುಂದುವರೆಸಿದ್ದು, ಗುರುವಾರ ಶರದ್ ಪವಾರ್ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ ಎಂದು ತಿಳಿದುಬಂದಿದೆ...

ನವದೆಹಲಿ: ಜಗಮೋಹನ್ ದಾಲ್ಮಿಯಾ ಅವರ ಸಾವಿನಿಂದ ತೆರವಾಗಿರುವ ಬಿಸಿಸಿಐ ಅಧ್ಯಕ್ಷಗಾದಿ ಮೇಲೆ ಕಣ್ಣಿಟ್ಟಿರುವ ಮಾಜಿ ಅಧ್ಯಕ್ಷ ಎನ್.ಶ್ರೀನಿವಾಸನ್ ಮತ್ತೆ ತಮ್ಮ ಪ್ರಯತ್ನ ಮುಂದುವರೆಸಿದ್ದು, ಗುರುವಾರ ಶರದ್ ಪವಾರ್ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ ಎಂದು ತಿಳಿದುಬಂದಿದೆ.
ಒಂದು ಕಾಲದ ವಿರೋಧಿಗಳೆಂದೇ ಗುರುತಿಸಿಕೊಂಡಿದ್ದ ಶ್ರೀನಿವಾಸನ್ ಮತ್ತು ಶರದ್ ಪವಾರ್ ಅವರ ಪರಸ್ಪರರ ಭೇಟಿ ಕ್ರಿಕೆಟ್ ರಂಗದಲ್ಲಿ ಭಾರಿ ಕುತೂಹಲಕ್ಕೆ ಕಾರಣವಾಗಿದ್ದು, ಮುಂಬರುವ ಬಿಸಿಸಿಐ ಅಧ್ಯಕ್ಷ ಗಾದಿ ಯಾರಿಗೆ ದಕ್ಕಲಿದೆ ಎಂಬುದರ ಕುರಿತು ನಿರೀಕ್ಷೆಗಳು ಹೆಚ್ಚಾಗಿವೆ. ಮೂಲಗಳ ಪ್ರಕಾರ ಐಸಿಸಿ ಮಾಜಿ ಅಧ್ಯಕ್ಷ ಶರದ್ ಪವಾರ್ ಮತ್ತು ಐಸಿಸಿಯ ಹಾಲಿ ಅಧ್ಯಕ್ಷ ಶ್ರೀನಿವಾಸನ್ ಅವರು ನಾಗಪುರದಲ್ಲಿ ಭೇಟಿ ಮಾಡಿ ಚರ್ಚಿಸಿದ್ದಾರೆ ಎಂದು ತಿಳಿದುಬಂದಿದೆ.
ಮಾಜಿ ಕೇಂದ್ರ ಸಚಿವ ಹಾಗೂ ಎನ್ ಸಿಪಿ ಮುಖಂಡ ಪ್ರಫುಲ್ ಪಟೇಲ್ ಅವರ ನಾಗಪುರದಲ್ಲಿರುವ ನಿವಾಸದಲ್ಲಿ ಈ ಇಬ್ಬರು ನಾಯಕರು ಭೇಟಿಯಾಗಿ ಸುಮಾರು ಗಂಟೆಗಳ ಕಾಲ ಚರ್ಚಿಸಿದ್ದಾರೆ. ಅಲ್ಲದೆ ಶ್ರೀನಿವಾಸನ್ ಅವರು ನಾಗಪುರದಿಂದ ನೇರವಾಗಿ ಬೆಂಗಳೂರಿಗೆ ಆಗಮಿಸುವ ಸಾಧ್ಯತೆ ಇದ್ದು, ಇಲ್ಲಿ ತಮ್ಮ ಬೆಂಬಲಿಗ ಸದಸ್ಯರೊಂದಿಗೆ ಚರ್ಚೆ ನಡೆಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
ಬಿಸಿಸಿಐ ಅಧ್ಯಕ್ಷ ಜಗಮೋಹನ್ ದಾಲ್ಮಿಯಾ ಅವರ ದಿಢೀರ್ ನಿಧನದಿಂದಾಗಿ ಅಧ್ಯಕ್ಷ ಗಾದಿ ತೆರವಾಗಿದ್ದು, ಐಪಿಎಲ್ ಸ್ಫಾಟ್ ಫಿಕ್ಸಿಂಗ್ ಹಗರಣದಿಂದಾಗಿ ಅಧ್ಯಕ್ಷ ಗಾದಿ ಕಳೆದುಕೊಂಡಿದ್ದ ಶ್ರೀನಿವಾಸನ್ ಮತ್ತೆ ತಮ್ಮ ಹಳೆಯ ಸ್ಥಾನ ಪಡೆಯಲು ಶತಪ್ರಯತ್ನ ನಡೆಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


