ಶಶಾಂಕ್ ಮನೋಹರ್ ಬಿಸಿಸಿಐ ಮುಂದಿನ ಅಧ್ಯಕ್ಷ?
ಕುತೂಹಲಕಾರಿ ಬೆಳವಣಿಗೆಯೊಂದರಲ್ಲಿ ಕೆಲವೇ ಗಂಟೆಗಳಲ್ಲಿ ಬಿಸಿಸಿಐ ಅಧ್ಯಕ್ಷರ ಆಯ್ಕೆ ವಿಷಯಕ್ಕೆ ಸಂಬಂಧಿಸಿದಂತೆ ಅಂತಿಮ ನಿರ್ಧಾರ ಹೊರ ಬೀಳುವ ಸಾಧ್ಯತೆ ಇದೆ....

ಕುತೂಹಲಕಾರಿ ಬೆಳವಣಿಗೆಯೊಂದರಲ್ಲಿ ಕೆಲವೇ ಗಂಟೆಗಳಲ್ಲಿ ಬಿಸಿಸಿಐ ಅಧ್ಯಕ್ಷರ ಆಯ್ಕೆ ವಿಷಯಕ್ಕೆ ಸಂಬಂಧಿಸಿದಂತೆ ಅಂತಿಮ ನಿರ್ಧಾರ ಹೊರ ಬೀಳುವ ಸಾಧ್ಯತೆ ಇದೆ.
ಶಶಾಂಕ್ ಮನೋಹರ್ ಬಿಸಿಸಿಐ ನೂತನ ಅಧ್ಯಕ್ಷರಾಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಮುಂಬಯಿ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷ ಶರದ್ ಪವಾರ್ ಹಾಗೂ ಕೇಂದ್ರ ಹಣಕಾಸು ಸಚಿವ ಅರುಣ್ ಜೈಟ್ಲಿ ಇಬ್ಬರು ಒಮ್ಮತಕ್ಕೆ ಬಂದಿದ್ದು, ಶಶಾಂಕ್ ಮನೋಹರ್ ಅವರನ್ನು ಬಿಸಿಸಿಐ ಅಧ್ಯಶ್ರರನ್ನಾಗಿ ನೇಮಕ ಮಾಡಲು ನಿರ್ಧರಿಸಲಾಗಿದೆ ಎನ್ನಲಾಗಿದೆ.
ಮುಂದಿನ 24 ಗಂಟೆಗಳಲ್ಲಿ ಈ ಸಂಬಂಧ ಅಧಿಕೃತ ಆದೇಶ ಹೊರಬೀಳಲಿದೆ. ಪ್ರಾಮಾಣಿಕ ಹಾಗೂ ಕ್ಲೀನ್ ಹ್ಯಾಂಡ್ ಅಭ್ಯರ್ಥಿಗಳ ಲಿಸ್ಟ್ ನಲ್ಲಿ ಶಶಾಂಕ್ ಮನೋಹರ್ ಹೆಸರು ಮೊದಲಿದೆ. ಹೀಗಾಗಿ ಶಶಾಂಕ್ ಮನೋಹರ್ ಅವರೇ ಬಿಸಿಸಿಐ ಅಧ್ಯಕ್ಷರಾಗುವುದು ಬಹುತೇಕ ಖಚಿತವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


