ಬಿಸಿಸಿಐ ನೂತನ ಅಧ್ಯಕ್ಷರಾಗಿ ಶಶಾಂಕ್ ಮನೋಹರ್ ಆಯ್ಕೆ ಬಹುತೇಕ ಖಚಿತ
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ಯ ನೂತನ ಅಧ್ಯಕ್ಷರಾಗಿ ನಾಗ್ಪುರ ವಕೀಲ ಶಶಾಂಕ್ ಮನೋಹರ್ ಅವರು ಆಯ್ಕೆಯಾಗುವುದು ಬಹುತೇಕ...

ಮುಂಬೈ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ಯ ನೂತನ ಅಧ್ಯಕ್ಷರಾಗಿ ನಾಗ್ಪುರ ವಕೀಲ ಶಶಾಂಕ್ ಮನೋಹರ್ ಅವರು ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.
ಈ ಸಂಬಂಧ ಅಕ್ಟೋಬರ್ 4ರಂದು ಬಿಸಿಸಿಐ ವಿಶೇಷ ಸಾಮಾನ್ಯ ಸಭೆ ಕರೆಯಲಾಗಿದ್ದು, ಅಂದು ಶಶಾಂಕ್ ಮನೋಹರ್ ಅವರನ್ನು ಎರಡನೇ ಬಾರಿಗೆ ಬಿಸಿಸಿಐ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗುವುದು ಎಂದು ಬಿಸಿಸಿಐ ಕಾರ್ಯದರ್ಶಿ ಅನುರಾಗ್ ಠಾಕೂರ್ ಅವರು ಹೇಳಿದ್ದಾರೆ.
'ಶಶಾಂಕ್ ಮನೋಹರ್ ಅವರು ನಮ್ಮೆಲ್ಲರ ಒಮ್ಮತದ ಅಭ್ಯರ್ಥಿಯಾಗಿದ್ದು, ಒಂದು ವೇಳೆ ಚುನಾವಣೆ ನಡೆದರೆ, ಬಿಸಿಸಿಐ ಮಾಜಿ ಅಧ್ಯಕ್ಷ ಎನ್.ಶ್ರೀನಿವಾಸನ್ ಅವರು ತಮ್ಮ ಮತ ಹಾಕಬಹುದು' ಎಂದು ಠಾಕೂರ್ ತಿಳಿಸಿದ್ದಾರೆ. ಅಲ್ಲದೆ ಶ್ರೀನಿವಾಸನ್ ಅವರು ಸಭೆಗೆ ಹಾಜರಾಗುವಂತಿಲ್ಲ. ಆದರೆ ಅವರು ಮತ ಚಲಾಯಿಸಬಹುದು ಎಂದಿದ್ದಾರೆ.
ಬಿಸಿಸಿಐ ಅಧ್ಯಕ್ಷರಾಗಿದ್ದ ಜಗಮೋಹನ್ ದಾಲ್ಮಿಯಾ ಅವರ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಶಶಾಂಕ್ ಮನೋಹರ್ ಅವರನ್ನು ಆಯ್ಕೆ ಮಾಡಲಾಗುತ್ತಿದೆ. ಈ ಹಿಂದೆ ಮನೋಹರ್ ಅವರು ಈ ಹಿಂದೆ 2008ರಿಂದ 2011ರವರೆಗೆ ಬಿಸಿಸಿಐ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


