ಕ್ರಿಕೆಟ್ ಆಡುವುದಕ್ಕಿಂತ ನಟನೆ ಮಾಡುವುದು ತುಂಬಾ ಕಷ್ಟ: ಸಚಿನ್ ತೆಂಡೂಲ್ಕರ್
ಕ್ರಿಕೆಟ್ ಆಡುವುದಕ್ಕಿಂತ ನೈಜವಾಗಿ ಸಿನಿಮಾದಲ್ಲಿ ಅಭಿನಯಿಸುವುದು ಸವಾಲಿನ ಕೆಲಸ ಎಂದು ಭಾರತೀಯ ಕ್ರಿಕೆಟ್ ದಂತ ಕತೆ ಸಚಿನ್ ತೆಂಡೂಲ್ಕರ್ ಅಭಿಪ್ರಾಯ ಪಟ್ಟಿದ್ದಾರೆ....

ಮುಂಬೈ: ಕ್ರಿಕೆಟ್ ಆಡುವುದಕ್ಕಿಂತ ನೈಜವಾಗಿ ಸಿನಿಮಾದಲ್ಲಿ ಅಭಿನಯಿಸುವುದು ಸವಾಲಿನ ಕೆಲಸ ಎಂದು ಭಾರತೀಯ ಕ್ರಿಕೆಟ್ ದಂತ ಕತೆ ಸಚಿನ್ ತೆಂಡೂಲ್ಕರ್ ಅಭಿಪ್ರಾಯ ಪಟ್ಟಿದ್ದಾರೆ.
ತಮ್ಮ ಬಹು ನಿರೀಕ್ಷಿತ ಸಚಿನ್ ದಿ ಫಿಲ್ಮ್, ಸಿನಿಮಾದ ಟೀಸರ್ ಅನ್ನು ಫೇಸ್ ಬುಕ್ ಮತ್ತು ಟ್ವಿಟರ್ ಗೆ ಅಪ್ ಲೋಡ್ ಮಾಡಿರುವ ಸಚಿನ್ ತಮ್ಮ ಮನದಾಳ ಮಾತುಗಳನ್ನು ಬಿಚ್ಚಿಟ್ಟಿದ್ದಾರೆ. ನಾನು ಎನೆಲ್ಲಾ ಮಾಡಿದ್ದೇನೋ, ಅದೆಲ್ಲಾವನ್ನು ಕ್ಯಾಮೆರಾ ಸೆರೆ ಹಿಡಿದಿದೆ. ಆದರೆ ಅದರಲ್ಲಿ ಇಂತಹುದ್ದೇ ಭಾಗವನ್ನು ಅಭಿನಯಿಸಬೇಕಾಗಿ ಬಂದಾಗ ತುಂಬಾ ಕಷ್ಟವಾಯಿತು. ನಟನೆಯ ಕನಸುಪ ನಾನಂದು ಕೊಂಡಷ್ಟು ಸುಲಭವಾಗಿರಲಿಲ್ಲ. ನಟನೆ ನನಗೆ ಸವಾಲಾಗಿತ್ತು ಎಂದು ಹೇಳಿದ್ದಾರೆ.
200 ನಾಟ್ ಔಟ್ ಎಂಬ ಮುಂಬಯಿ ಮೂಲದ ಪ್ರೊಡಕ್ಷನ್ ಕಂಪನಿ ಸಿನಿಮಾ ನಿರ್ಮಾಣ ಮಾಡುತ್ತಿದ್ದು, ಲಂಡನ್ ಮೂಲದ ಪ್ರಶಸ್ತಿ ಪುರಸ್ಕೃತ ಬರಹಗಾರ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಎ.ಆರ್ ರೆಹಮಾನ್ ಸಿನಿಮಾಗೆ ಸಂಗೀತ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


