ರಿಯೋ ಒಲಿಂಪಿಕ್ಸ್‌ಗೆ ಕ್ಷಣಗಣನೆ: ಒಲಿಂಪಿಕ್ಸ್‌ಗೆ ಫುಟ್ಬಾಲ್ ದಿಗ್ಗಜ ಪೀಲೆರಿಂದ ಚಾಲನೆ
ಜಗತ್ತೇ ಎದುರು ನೋಡುತ್ತಿರುವ ರಿಯೋ ಒಲಿಂಪಿಕ್ಸ್‌ಗೆ ಕ್ಷಣಗಣನೆ ಶುರುವಾಗಿದ್ದು ಬ್ರೆಜಿಲ್ ಕಾಲಮಾನ ಪ್ರಕಾರ ರಾತ್ರಿ 8 ಗಂಟೆಗೆ ಉದ್ಘಾಟನಾ ಸಮಾರಂಭ ನಡೆಯಲಿದೆ...

ಜಗತ್ತೇ ಎದುರು ನೋಡುತ್ತಿರುವ ರಿಯೋ ಒಲಿಂಪಿಕ್ಸ್‌ಗೆ ಕ್ಷಣಗಣನೆ ಶುರುವಾಗಿದ್ದು ಬ್ರೆಜಿಲ್ ಕಾಲಮಾನ ಪ್ರಕಾರ ರಾತ್ರಿ 8 ಗಂಟೆಗೆ ಉದ್ಘಾಟನಾ ಸಮಾರಂಭ ನಡೆಯಲಿದೆ.
ಬ್ರೆಜಿಲ್ ನ ಮರಕಾನ ಕ್ರೀಡಾಂಗಣದಲ್ಲಿ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಸುಮಾರು 6 ಸಾವಿರ ಕಲಾವಿದರು ಭಾಗಿಯಾಗಲಿದ್ದಾರೆ. ಉದ್ಘಾಟನಾ ಕಾರ್ಯಕ್ರಮಕ್ಕೆ ಸುಮಾರು 78 ಸಾವಿರ ಜನ ಪ್ರೇಕ್ಷಕರು ಸಾಕ್ಷಿಯಾಗಲಿದ್ದಾರೆ.
31ನೇ ಆವೃತ್ತಿಯ ಒಲಿಂಪಿಕ್ಸ್ ಗೆ ರಿಯೋ ಸಜ್ಜಾಗಿದ್ದು, ಫುಟ್ಬಾಲ್ ದಿಗ್ಗಜ ಪೀಲೆ ಅವರು ಒಲಿಂಪಿಕ್ಸ್ ಜ್ಯೋತಿ ಬೆಳಗುವ ಮೂಲಕ ಕ್ರೀಡೋತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಇದರೊಂದಿಗೆ 17 ದಿನಗಳ ಕ್ರೀಡಾಸ್ಪರ್ಧೆಗೆ ಚಾಲನೆ ಸಿಗಲಿದೆ. ಇನ್ನು ಬ್ರೆಜಿಲ್ ನ ಕಾರ್ನಿವಾಲ್, ಸಾಂಬಾ ನೃತ್ಯಗಳು ಸಮಾರಂಭದ ಹೈಲೈಟ್.
ರಿಯೋ ಒಲಿಂಪಿಕ್ಸ್ ನಲ್ಲಿ 28 ಕ್ರೀಡೆಗಳಿದ್ದು, 37 ಕ್ರೀಡಾಂಗಣದಲ್ಲಿ ಸ್ಪರ್ಧೆ ನಡೆಯಲಿದೆ. ಈ ಭಾರೀ 208 ದೇಶಗಳಲ್ಲಿ ಒಲಿಂಪಿಕ್ಸ್ ನಲ್ಲಿ ಪಾಲ್ಗೋಳಲಿವೆ. ಇನ್ನು ಕ್ರೀಡಾಕೂಟದಲ್ಲಿ 11,239 ಕ್ರೀಡಾಪುಟಗಳು ಭಾಗವಹಿಸಲಿದ್ದಾರೆ.
ರಿಯೋ ಒಲಿಂಪಿಕ್ಸ್ ನಲ್ಲಿ ಭಾರತ
ರಿಯೋ ಒಲಿಂಪಿಕ್ಸ್ ನಲ್ಲಿ ಭಾರತದಿಂದ 118 ಕ್ರೀಡಾಪುಟಗಳು ಭಾಗವಹಿಸಲಿದ್ದಾರೆ. 15 ಕ್ರೀಡೆಗಳಲ್ಲಿ ಭಾರತ ಸ್ಪರ್ಧಿಸಲಿದೆ. ಆರಂಭೋತ್ಸವದಲ್ಲಿ ಭಾರತದ ತ್ರಿವರ್ಣ ಧ್ವಜವನ್ನು ಶೂಟರ್ ಅಭಿನವ್ ಬಿಂದ್ರಾ ಹಿಡಿದು ಮುನ್ನಡೆಯಲಿದ್ದಾರೆ. ಭಾರತ ಕಾಲಮಾನ ಪ್ರಕಾರ ಆಗಸ್ಟ್ 6 ಬೆಳಗ್ಗೆ 4.20 ಸುಮಾರಿಗೆ ಉದ್ಘಾಟನೆ ಕಾರ್ಯಕ್ರಮ ಪ್ರಸಾರವಾಗಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


