ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಕ್ರೀಡಾಪಟುಗಳನ್ನು ಹುರಿದುಂಬಿಸಿ: ಮೋದಿಗೆ ಸಚಿನ್ ಮನವಿ
ಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರಿಯೊ ಒಲಿಂಪಿಕ್ಸ್‌ನಲ್ಲಿ ಭಾಗವಹಿಸಿರುವ ಕ್ರೀಡಾಪಟುಗಳು ದೇಶಕ್ಕಾಗಿ ಪದಕ ಗೆದ್ದು ಬರುವಂತೆ ಹುರಿದುಂಬಿಸಬೇಕು ..

ನವದೆಹಲಿ: ಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರಿಯೊ ಒಲಿಂಪಿಕ್ಸ್‌ನಲ್ಲಿ ಭಾಗವಹಿಸಿರುವ ಕ್ರೀಡಾಪಟುಗಳು ದೇಶಕ್ಕಾಗಿ ಪದಕ ಗೆದ್ದು ಬರುವಂತೆ ಹುರಿದುಂಬಿಸಬೇಕು ಎಂದು ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಹೇಳಿದ್ದಾರೆ.
ಪದಕ ಗೆಲ್ಲುವಲ್ಲಿ ವಿಫಲವಾಗಿರುವ ಕ್ರೀಡಾಪಟುಗಳು ಮತ್ತು ಪದಕಕ್ಕಾಗಿ ಹೋರಾಡುತ್ತಿರುವ ಕ್ರೀಡಾಪಟುಗಳಿಗೆ ಭಾಷಣದಲ್ಲಿ ಪ್ರೋತ್ಸಾಹದಾಯಕ ಮಾತುಗಳನ್ನಾಡಬೇಕು ಎಂದು ಸಚಿನ್ ಮನವಿ ಮಾಡಿದ್ದಾರೆ. ನಿಮ್ಮ ಪ್ರೋತ್ಸಾಹದಾಯಕ ಮಾತುಗಳು ಕ್ರೀಡಾಪಟುಗಳ ಮೇಲೆ ಪರಿಣಾಮ ಬೀರಲಿದೆ. ಇದರಿಂದ ಅವರಿಗೆ ಸ್ಫೂರ್ತಿ ಬರುತ್ತದೆ ಎಂದು ಅವರು ಹೇಳಿದ್ದಾರೆ.
ಒಲಿಂಪಿಕ್ಸ್‌ನಲ್ಲಿ ವಿವಿಧ ರಾಜ್ಯಗಳ ಕ್ರೀಡಾಪಟುಗಳು ಭಾಗವಹಿಸಿದ್ದಾರೆ. ಒಲಿಂಪಿಕ್ಸ್‌ನಲ್ಲಿ ದೇಶವನ್ನು ಪ್ರತಿನಿಧಿಸುವುದೇ ಒಂದು ಸಾಧನೆ. ವಿಶ್ವದ ಅತ್ಯುತ್ತಮ ಕ್ರೀಡಾಪಟುಗಳನ್ನು ಎದುರಿಸಿ ಪದಕದ ಸಾಧನೆ ಮಾಡಬೇಕು ಎಂದು ಅವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


