ಕ್ರೀಡೆ

ರಿಯೋ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಮೊದಲ ಪದಕ, ಕುಸ್ತಿಯಲ್ಲಿ ಸಾಕ್ಷಿಗೆ ಕಂಚು

ರಿಯೋ ಒಲಿಂಪಿಕ್ಸ್ ನಲ್ಲಿ ಕಂಚು ಪದಕ ಗೆಲ್ಲುವ ಮೂಲಕ ಕುಸ್ತಿಪಟು ಸಾಕ್ಷಿ ಮಲಿಕ್ ಭಾರತಕ್ಕೆ ಮೊದಲ ಪದಕ ತಂದುಕೊಟ್ಟಿದ್ದಾರೆ...

ರಿಯೋ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಮೊದಲ ಪದಕ, ಕುಸ್ತಿಯಲ್ಲಿ ಸಾಕ್ಷಿಗೆ ಕಂಚು
ಸಾಕ್ಷಿ ಮಲಿಕ್
Published On :

ರಿಯೋ ಡಿ ಜನೈರೋ: ರಿಯೋ ಒಲಿಂಪಿಕ್ಸ್ ನಲ್ಲಿ ಕಂಚು ಪದಕ ಗೆಲ್ಲುವ ಮೂಲಕ ಕುಸ್ತಿಪಟು ಸಾಕ್ಷಿ ಮಲಿಕ್ ಭಾರತಕ್ಕೆ ಮೊದಲ ಪದಕ ತಂದುಕೊಟ್ಟಿದ್ದಾರೆ.

58 ಕೆಜಿ ಫ್ರೀ ಸ್ಟೈಲ್ ಮಹಿಳೆಯರ ವಿಭಾಗದಲ್ಲಿ ಸಾಕ್ಷಿ ಮಲಿಕ್ ಕಿರ್ಗಿಸ್ತಾನದ ಐಸಿಲೂ ಟೈನೀಬೆಕೋವಾ ವಿರುದ್ಧ ಗೆಲ್ಲುವ ಮೂಲಕ ಕಂಚಿನ ಪದಕ ತಮ್ಮದಾಗಿಸಿಕೊಂಡಿದ್ದಾರೆ. ಮೊದಲ ಹಂತದಲ್ಲಿ 0-5 ಅಂಕಗಳಿಂದ ಹಿನ್ನಡೆ ಅನುಭವಿಸಿದ್ದ ಸಾಕ್ಷಿ ಮಲ್ಲಿಕ್ ಎರಡನೇ ಹಂತದಲ್ಲಿ ಅಮೋಘ ಪ್ರದರ್ಶನ ನೀಡಿ 8-5 ಅಂತರದ ಗೆಲವು ಸಾಧಿಸಿದರು.

ಈ ಪಂದ್ಯಕ್ಕೂ ಮುನ್ನ ನಡೆದ ಪಂದ್ಯದಲ್ಲಿ ಸಾಕ್ಷಿ ಮಂಗೋಲಿಯಾದ ಅರ್ಕೋನ್ ಪುರುವ್ಡೇಜ್ ವಿರುದ್ಧ 12-03 ಅಂಕಗಳ ಅಂತರದಲ್ಲಿ ಗೆದ್ದ ಸಾಕ್ಷಿ ಮಲ್ಲಿಕ್ ಪದಕದ ಆಸೆ ಜೀವಂತವಾಗಿರಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.