ಕ್ರೀಡೆ

ರಿಯೋ ಒಲಿಂಪಿಕ್ಸ್: ಬೆಳ್ಳಿಗೆ ತೃಪ್ತಿಪಟ್ಟ ಪಿವಿ ಸಿಂಧು

ರಿಯೋ ಒಲಿಂಪಿಕ್ಸ್ ನ ಫೈನಲ್ ಪಂದ್ಯದಲ್ಲಿ ಪಿವಿ ಸಿಂಧು ಸ್ಪೇನ್ ನ ಕ್ಯಾರೊಲಿನಾ ಮರಿನ್ ವಿರುದ್ಧ ಪರಾಭವಗೊಂಡಿದ್ದಾರೆ...

ರಿಯೋ ಒಲಿಂಪಿಕ್ಸ್: ಬೆಳ್ಳಿಗೆ ತೃಪ್ತಿಪಟ್ಟ ಪಿವಿ ಸಿಂಧು
ಪಿವಿ ಸಿಂಧು
Published On :
ರಿಯೋ ಡಿ ಜನೈರೋ: ರಿಯೋ ಒಲಿಂಪಿಕ್ಸ್ ನ ಫೈನಲ್ ಪಂದ್ಯದಲ್ಲಿ ಪಿವಿ ಸಿಂಧು ಸ್ಪೇನ್ ನ ಕ್ಯಾರೊಲಿನಾ ಮರಿನ್ ವಿರುದ್ಧ ಪರಾಭವಗೊಂಡಿದ್ದಾರೆ.
ಫೈನಲ್ ಪಂದ್ಯದಲ್ಲಿ ಭಾರತದ 10ನೇ ಶ್ರೇಯಾಂಕಿತೆ ಪಿವಿ ಸಿಂಧು ಮೊದಲ ಸೆಟ್ ನ ಜಿದ್ದಾಜಿದ್ದಿನ ಹೋರಾಟದಲ್ಲಿ 21-19 ಅಂಕಗಳ ಅಂತರದಲ್ಲಿ ಮಣಿಸಿದರು. ಎರಡನೇ ಸೆಟ್ ನಲ್ಲಿ ಆಕ್ರಮಣಕಾರಿ ಆಟವಾಡಿದ ಮರಿನ್ 21-12 ಅಂಕಗಳಿಂದ ಸಿಂಧುರನ್ನು ಮಣಿಸಿದರು. ಮೂರನೇ ಸೆಟ್ ನಲ್ಲಿ ಸಿಂಧು ವಿರುದ್ಧ ಮತ್ತೆ ಆಕ್ರಮಣ ಆಟವಾಡಿದ ಮರಿನ 21-15 ಅಂಕಗಳಿಂದ ಸೋಲಿಸಿ ಸ್ವರ್ಣಕ್ಕೆ ಮುತ್ತಿಟ್ಟರು. ಇದರೊಂದಿಗೆ ಸಿಂಧು ಬೆಳ್ಳಿಗೆ ತೃಪ್ತಿಪಡಬೇಕಾಯಿತು.
ಸಾಂಬಾ ನಾಡಲ್ಲಿ ನಡೆಯುತ್ತಿರುವ ರಿಯೋ ಒಲಿಂಪಿಕ್ಸ್ ನ ವನಿತೆಯರ ಸಿಂಗಲ್ಸ್ ವಿಭಾಗದಲ್ಲಿ ಫೈನಲ್ ತಲುಪಿದ್ದ ಪಿವಿ ಸಿಂಧು ಭಾರತದ ಪರ ಬೆಳ್ಳಿ ಪದಕಕ್ಕೆ ತೃಪ್ತರಾದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.