ಬೆಂಗಳೂರು: ಅಥ್ಲೀಟ್ ಸುಧಾ ಸಿಂಗ್‌ಗೆ ಝಿಕಾ ಜ್ವರ ಭೀತಿ, ಆಸ್ಪತ್ರೆಗೆ ದಾಖಲು
ರಿಯೋ ಒಲಿಂಪಿಕ್ಸ್ ನಲ್ಲಿ ಭಾಗವಹಿಸಿದ್ದ ಅಥ್ಲೀಟ್ ಸುಧಾ ಸಿಂಗ್ ಅವರು ತೀವ್ರ ಜ್ವರದಿಂದ ಬಳಲುತ್ತಿದ್ದು ಝಿಕಾ ಜ್ವರದ ಶಂಕೆ ಎದುರಾಗಿದೆ...

ಬೆಂಗಳೂರು: ರಿಯೋ ಒಲಿಂಪಿಕ್ಸ್ ನಲ್ಲಿ ಭಾಗವಹಿಸಿದ್ದ ಅಥ್ಲೀಟ್ ಸುಧಾ ಸಿಂಗ್ ಅವರು ತೀವ್ರ ಜ್ವರದಿಂದ ಬಳಲುತ್ತಿದ್ದು ಝಿಕಾ ಜ್ವರದ ಶಂಕೆ ಎದುರಾಗಿದೆ.
ರಿಯೋದಿಂದ ಹಿಂದಿರುಗಿದ ಶನಿವಾರವೇ ಸುಧಾ ಸಿಂಗ್ ಬೆಂಗಳೂರಿನ ಪೋರ್ಟಿಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದು, ಝಿಕಾ ವೈರಸ್ ಶಂಕೆ ಹಿನ್ನೆಲೆಯಲ್ಲಿ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಒಳಪಡಿಸಲಾಗಿದೆ.
ಈ ಹಿಂದೆ ಎಬೊಲಾ ವೈರಸ್ ವಿಶ್ವದ ನಿದ್ದೆಗೆಡಿಸಿತ್ತು. ಇದೀಗ ಬ್ರೆಜಿಲ್ ನಲ್ಲಿ ಝಿಕಾ ವೈರಸ್ ವಿಶ್ವದಾದ್ಯಂತ ತಾಂಡವವಾಡುತ್ತಿದೆ. ಇದರಿಂದಾಗಿ ರಿಯೋ ಒಲಿಂಪಿಕ್ಸ್ ನಲ್ಲಿ ಭಾಗವಹಿಸಿದ್ದ ಸುಧಾಗೂ ಝಿಕಾ ಜ್ವರಕ್ಕೆ ತುತ್ತಾಗಿದ್ದಾರೆ ಎಂದು ಶಂಕಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


