ಕ್ರೀಡೆ

ಇಂದಿನಿಂದ ಬೆಂಗಳೂರಲ್ಲಿ ಪ್ರೊ ಕಬಡ್ಡಿ ಶುರು: ಬೆಂಗಳೂರು ಬುಲ್ಸ್ ಗೆ ಇಂದು ಪಾಟ್ನಾ ಸವಾಲು

ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ಕಳೆದು ನಾಲ್ಕು ದಿನಗಳಿಂದ ನಡೆಯುತ್ತಿದ್ದ ಪ್ರೊ ಕಬಡ್ಡಿ ಪಂದ್ಯಾವಳಿಯು ಇಂದಿನಿಂದ...

ಇಂದಿನಿಂದ ಬೆಂಗಳೂರಲ್ಲಿ ಪ್ರೊ ಕಬಡ್ಡಿ ಶುರು: ಬೆಂಗಳೂರು ಬುಲ್ಸ್ ಗೆ ಇಂದು ಪಾಟ್ನಾ ಸವಾಲು
ಪ್ರೊ ಕಬಡ್ಡಿ
Published On :
ಬೆಂಗಳೂರು: ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ಕಳೆದು ನಾಲ್ಕು ದಿನಗಳಿಂದ ನಡೆಯುತ್ತಿದ್ದ ಪ್ರೊ ಕಬಡ್ಡಿ ಪಂದ್ಯಾವಳಿಯು ಇಂದಿನಿಂದ ಬೆಂಗಳೂರಿನಲ್ಲಿ ನಡೆಯಲಿದೆ.
ಕಳೆದೆರಡು ಆವೃತ್ತಿಗಳಲ್ಲಿ ಭರ್ಜರಿ ಪ್ರದರ್ಶನ ನೀಡಿದ ಹೊರತಾಗಿಯೂ ಪ್ರಶಸ್ತಿಯ ಸನಿಹದಲ್ಲಿ ಎಡವಿದ್ದ ಬೆಂಗಳೂರು ಬುಲ್ಸ್ ಈ ಬಾರಿ ನಿರೀಕ್ಷಿತ ಗುರಿ ಸಾಧನೆಗೆ ಸನ್ನದ್ಧವಾಗಿದೆ.
ನಗರದ ಶ್ರೀಕಂಠೀರವ ಒಳಗಾಂಣ ಕ್ರೀಡಾಂಗಣವು ನಾಲ್ಕು ದಿನಗಳ ಕಾಲ ನಡೆಯಲಿರುವ ಪಂದ್ಯಾವಳಿಗೆ ಪೂರ್ಣ ಪ್ರಮಾಣದಲ್ಲಿ ಸಜ್ಜಾಗಿ ನಿಂತಿದೆ. 
Story image
ವಿಶಾಖಪಟ್ಟಣದಲ್ಲಿ ನಡೆದ ಮೊದಲ ಹಂತದಲ್ಲಿನ ತನ್ನ ಆರಂಭಿಕ ಪಂದ್ಯದಲ್ಲಿ ದಬಾಂಗ್ ಡೆಲ್ಲಿಯನ್ನು 6 ಪಾಯಿಂಟ್ಸ್ ಗಳಿಂದ ಮಣಿಸಿ ಈ ಋತುವಿನ ಪಂದ್ಯಾವಳಿಯಲ್ಲಿ ಶುಭಾರಂಭ ಮಾಡಿರುವ ಬೆಂಗಳೂರು ಬುಲ್ಸ್, ಸದ್ಯ ಅಂಕಪಟ್ಟಿಯಲ್ಲ 5 ಅಂಕ ಗಳಿಸಿ ಮೂರನೇ ಸ್ಥಾನದಲ್ಲಿದೆ. 
ತವರಿನಲ್ಲಿ ಶುಭಾರಂಭದ ಗುರಿ ಹೊತ್ತಿರುವ ಸುರ್ಜೀತ್ ನರ್ವಾಲ್ ತಂಡವನ್ನು ಯಶಸ್ಸಿನತ್ತ ಮುನ್ನಡೆಸುವ ಭರವಸೆಯಲ್ಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.