ಟೀಂ ಇಂಡಿಯಾ ಟಿ20 ವಿಶ್ವಕಪ್ ಫೇವರಿಟ್: ಲಾರಾ
ಆಸ್ಟ್ರೇಲಿಯಾ ತವರಿನಲ್ಲಿ ಟಿ20 ಸರಣಿ ಗೆದ್ದ ಟೀಂ ಇಂಡಿಯಾ ಆತ್ಮಸ್ಥೈರ್ಯ ಹೆಚ್ಚಾಗಿದ್ದು, ಮಾರ್ಚ್ ನಲ್ಲಿ ತವರಿನಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ನಲ್ಲಿ ಆತಿಥೇಯ ಟೀಂ...

ದುಬೈ: ಆಸ್ಟ್ರೇಲಿಯಾ ತವರಿನಲ್ಲಿ ಟಿ20 ಸರಣಿ ಗೆದ್ದ ಟೀಂ ಇಂಡಿಯಾ ಆತ್ಮಸ್ಥೈರ್ಯ ಹೆಚ್ಚಾಗಿದ್ದು, ಮಾರ್ಚ್ ನಲ್ಲಿ ತವರಿನಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ನಲ್ಲಿ ಆತಿಥೇಯ ಟೀಂ ಇಂಡಿಯಾ ಪ್ರಶಸ್ತಿ ಗೆಲ್ಲುವ ಫೇವರಿಟ್ ತಂಡವಾಗಿದೆ ಎಂದು ವೆಸ್ಟ್ ಇಂಡೀಸ್ ನ ಬ್ಯಾಟಿಂಗ್ ದಂತಕತೆ ಬ್ರಿಯಾನ್ ಲಾರಾ ಅಭಿಪ್ರಾಯಪಟ್ಟಿದ್ದಾರೆ.
ಟೀಂ ಇಂಡಿಯಾ ವೆಸ್ಟ್ ಇಂಡೀಸ್ ತಂಡ ಸ್ಥಿರ ಪ್ರದರ್ಶನ ನೀಡಿದರೆ, ಖಂಡಿತವಾಗಿಯೂ ಪ್ರಬಲ ಸವಾಲಾಗಿ ನಿಲ್ಲಬಹುದು ಎಂದು ಲಾರಾ ಹೇಳಿದ್ದಾರೆ. ತವರಿನ ಅಂಗಣದಲ್ಲಿ ಭಾರತ ತಂಡ ಸದಾ ಬಲಿಷ್ಠ. ವಿಶ್ವದ ಪ್ರಬಲ ತಂಡಗಳ ವಿರುದ್ಧ ಉತ್ತಮ ಪ್ರದರ್ಶನ ನೀಡುತ್ತಿದ್ದು, ಅವರ ಆಟಗಾರರು ಪಿಚ್ ಬಗ್ಗೆ ಹೆಚ್ಚು ಅರಿತಿದ್ದಾರೆ. ಹಾಗಾಗಿ ಅವರಿಗೆ ಮೊದಲ ಶ್ರೇಯಾಂಕ ನೀಡುತ್ತೇವೆ. ಇನ್ನು ವೆಸ್ಟ್ ಇಂಡೀಸ್ ತಂಡ ಸ್ಥಿರ ಪ್ರದರ್ಶನ ನೀಡಿದ್ದೇ ಆದಲ್ಲಿ ಅದು ಮಿಕ್ಕ ತಂಡಗಳಿಗೆ ಸವಾಲಾಗಿ ನಿಲ್ಲಬಹುದು ಎಂದು ಲಾರಾ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


