ಟಿ20 ವಿಶ್ವಕಪ್ ಪಂದ್ಯಾವಳಿಗೆ ಹೆಚ್ಚಿನ ಭದ್ರತೆ: ಅನುರಾಗ್ ಠಾಕೂರ್
ಅಭದ್ರತೆ ಕಾರಣ ನೀಡಿ ಪಾಕಿಸ್ತಾನ ಟಿ20 ವಿಶ್ವಕಪ್ ಪಂದ್ಯಾವಳಿಯಿಂದ ದೂರ ಉಳಿಯಲಿದೆ ಎಂಬ ಊಹಾಪೋಹದ ಹಿನ್ನೆಲೆ ಭಾರತ ಕ್ರಿಕೆಟ್ ನಿಯಂತ್ರಣ...

ಭುವನೇಶ್ವರ್: ಅಭದ್ರತೆ ಕಾರಣ ನೀಡಿ ಪಾಕಿಸ್ತಾನ ಟಿ20 ವಿಶ್ವಕಪ್ ಪಂದ್ಯಾವಳಿಯಿಂದ ದೂರ ಉಳಿಯಲಿದೆ ಎಂಬ ಊಹಾಪೋಹದ ಹಿನ್ನೆಲೆ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಕಾರ್ಯದರ್ಶಿ ಅನುರಾಗ್ ಠಾಕೂರ್ ಟಿ20 ವಿಶ್ವಕಪ್ ಗೆ ಸಾಧ್ಯವಾದಷ್ಟು ಬಿಗಿ ಭದ್ರತೆ ನೀಡಲಾಗುವುದು ಎಂದು ಹೇಳಿದ್ದಾರೆ.
ಟಿ20 ವಿಶ್ವಕಪ್ ಪಂದ್ಯಾವಳಿಯಲ್ಲಿ ಪಾಕಿಸ್ತಾನ ಸೇರಿದಂತೆ 16 ಅಂತಾರಾಷ್ಟ್ರೀಯ ತಂಡಗಳು ಭಾಗವಹಿಸುತ್ತಿದ್ದು, ಎಲ್ಲಾ ತಂಡಗಳ ಸುರಕ್ಷತೆ ನಮ್ಮ ಜವಾಬ್ದಾರಿ ಹೀಗಾಗಿ ಪ್ರತಿಯೊಂದು ತಂಡಕ್ಕೂ ಸಾಧ್ಯವಾದಷ್ಟು ಭದ್ರತೆ ಒದಗಿಸಲಾಗುವುದು. ಪಂದ್ಯಗಳು ನಡೆಯುವ ಸ್ಥಳಗಳಲ್ಲಿ ಭಾರತ ಸರ್ಕಾರ ಹೆಚ್ಚಿನ ಭದ್ರತೆಯನ್ನು ಒದಗಿಸಲಿದೆ ಎಂದರು.
ಈ ಹಿಂದೆ ಹಲವು ಪ್ರಮುಖ ಪಂದ್ಯಾವಳಿಗಳನ್ನು ಬಿಸಿಸಿಐ ಯಾವುದೇ ಅಡೆತಡೆ ಇಲ್ಲದೆ ಸಾಂಗವಾಗಿ ಆಯೋಜಿಸಿದೆ. ಈಗಿರುವಾಗ ಪಾಕಿಸ್ತಾನ ಟಿ20 ವಿಶ್ವಕಪ್ ನ್ನು ಭಾರತದಲ್ಲಿ ಆಡಬೇಕೋ ಬೇಡವೋ ಎಂಬುದನ್ನು ನಿರ್ಧರಿಸಲಿ ಎಂದು ಹೇಳಿದ್ದಾರೆ.
ಅಭದ್ರತೆ ಹಿನ್ನೆಲೆಯಲ್ಲಿ ಪಾಕಿಸ್ತಾನ ಸರ್ಕಾರ ಭಾರತದಲ್ಲಿ ಟಿ20 ವಿಶ್ವಕಪ್ ಪಂದ್ಯಾವಳಿಯಲ್ಲಿ ಆಡಲು ಅನುಮತಿ ನೀಡಿದೆ ಇದ್ದರೆ ಪಂದ್ಯಾವಳಿಯಿಂದ ಹಿಂತಿರುಗುವುದಾಗಿ ಪಾಕಿಸ್ತಾನ ಕ್ರಿಕೆಟ್ ಮಂಡಳಿ(ಪಿಸಿಬಿ) ಮುಖ್ಯಸ್ಥ ಶಹರ್ಯಾರ್ ಖಾನ್ ಸುಳಿವು ನೀಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


