ಯುವರಾಜ್ ಸಿಂಗ್ ಗೆ ಬಡ್ತಿ ಕೊಡಲು ಸಾಧ್ಯವಿಲ್ಲ: ಧೋನಿ
ಸದ್ಯದ ಪರಿಸ್ಥಿತಿಯಲ್ಲಿ ಆಲ್‌ರೌಂಡರ್ ಯುವರಾಜ್ ಸಿಂಗ್‌ಗೆ ಬ್ಯಾಟಿಂಗ್ ಕ್ರಮಾಂಕದಲ್ಲಿ ಬಡ್ತಿ ನೀಡಲು ಸಾಧ್ಯವಿಲ್ಲ ಎಂದು ಭಾರತ ಕ್ರಿಕೆಟ್ ತಂಡದ ನಾಯಕ ..

ರಾಂಚಿ: ಸದ್ಯದ ಪರಿಸ್ಥಿತಿಯಲ್ಲಿ ಆಲ್‌ರೌಂಡರ್ ಯುವರಾಜ್ ಸಿಂಗ್‌ಗೆ ಬ್ಯಾಟಿಂಗ್ ಕ್ರಮಾಂಕದಲ್ಲಿ ಬಡ್ತಿ ನೀಡಲು ಸಾಧ್ಯವಿಲ್ಲ ಎಂದು ಭಾರತ ಕ್ರಿಕೆಟ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಹೇಳಿದ್ದಾರೆ.
ಶ್ರೀಲಂಕಾ ವಿರುದ್ಧದ ಟ್ವೆಂಟಿ -20 ಸರಣಿಯ ಎರಡನೇ ಪಂದ್ಯವನ್ನು ಗೆದ್ದು ಸರಣಿ ಸಮಬಲಗೊಳಿಸಿದ ಬಳಿಕ ಮಾತನಾಡಿದ ಧೋನಿ ಯುವಿಗೆ ಬ್ಯಾಟಿಂಗ್ ಅವಕಾಶ ಸಿಗದ ಬಗ್ಗೆ ಮನದ ಮಾತು ಬಿಚ್ಚಿಟ್ಟರು.
ಎರಡನೇ ಪಂದ್ಯದಲ್ಲಿ ಬ್ಯಾಟಿಂಗ್ ಕ್ರಮಾಂಕದಲ್ಲಿ ಪ್ರಯೋಗ ನಡೆಸಿದ್ದ ಧೋನಿ, ಯುವ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯಾಗೆ ಬ್ಯಾಟಿಂಗ್ ಕ್ರಮಾಂಕದಲ್ಲಿ ಬಡ್ತಿ ನೀಡಿದ್ದರಲ್ಲದೆ, ಯುವರಾಜ್ ಸಿಂಗ್‌ರನ್ನು ಏಳನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಇಳಿಸಿದ್ದರು. ಆದರೆ ಈ ಪ್ರಯೋಗದಲ್ಲಿ ವಿಫಲರಾದ ಯುವಿ ಶೂನ್ಯಕ್ಕೆ ಔಟಾಗಿದ್ದರು.
ಆಗ್ರ ಕ್ರಮಾಂಕದಲ್ಲಿರುವ ಆರಂಭಿಕ ಆಟಗಾರರಾದ ಶಿಖರ್ ಧವನ್, ರೋಹಿತ್ ಶರ್ಮಾ, ನಂ.3 ವಿರಾಟ್ ಕೊಹ್ಲಿ, 4ನೇ ಕ್ರಮಾಂಕದಲ್ಲಿ ಸುರೇಶ್ ರೈನಾ ಟ್ವೆಂಟಿ-20 ಪಂದ್ಯಗಳಲ್ಲಿ ಅಸಾಧಾರಣ ದಾಖಲೆಗಳನ್ನು ನಿರ್ಮಿಸಿದ್ದಾರೆ. ಹೀಗಾಗಿ ಅವರಿಗಿಂತ ಮುನ್ನ ಯುವಿಯನ್ನು ಬ್ಯಾಟಿಂಗ್ ಇಳಿಸುವುದು ಕಷ್ಟಸಾಧ್ಯ ಎಂದು ಶ್ರೀಲಂಕಾವನ್ನು 69 ರನ್‌ಗಳಿಂದ ಸೋಲಿಸಿ ಮೂರು ಪಂದ್ಯಗಳ ಸರಣಿಯನ್ನು ಸಮಬಲಗೊಳಿಸಿದ ಖುಷಿಯಲ್ಲಿದ್ದ ಧೋನಿ ತಿಳಿಸಿದರು. ಯುವಿಗೆ ಹೆಚ್ಚಿನ ಬ್ಯಾಟಿಂಗ್ ಅವಕಾಶಗಳನ್ನು ನೀಡುವುದಾಗಿ ಧೋನಿ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


