ಟಿ20 ವಿಶ್ವಕಪ್: ಭಾರತ ನೆಲದಲ್ಲಿ ಆಡಿ, ಇಲ್ಲವೆ ಕಾನೂನು ಕ್ರಮ: ಪಿಸಿಬಿಗೆ ಐಸಿಸಿ ಎಚ್ಚರಿಕೆ
ಮುಂಬವರು ಟಿ20 ವಿಶ್ವಕಪ್ ಪಂದ್ಯಾವಳಿ ಭಾರತದಲ್ಲಿ ನಡೆಯುತ್ತಿದ್ದು ಈ ಪಂದ್ಯಾವಳಿಯಲ್ಲಿ ಭಾಗವಹಿಸುವ ಬಗ್ಗೆ ಪಾಕಿಸ್ತಾನ ತಕರಾರು ಎತ್ತಿದ್ದ ಬೆನ್ನಲ್ಲೇ...

ದುಬೈ: ಮುಂಬವರು ಟಿ20 ವಿಶ್ವಕಪ್ ಪಂದ್ಯಾವಳಿ ಭಾರತದಲ್ಲಿ ನಡೆಯುತ್ತಿದ್ದು ಈ ಪಂದ್ಯಾವಳಿಯಲ್ಲಿ ಭಾಗವಹಿಸುವ ಬಗ್ಗೆ ಪಾಕಿಸ್ತಾನ ತಕರಾರು ಎತ್ತಿದ್ದ ಬೆನ್ನಲ್ಲೇ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಪಿಸಿಬಿಗೆ ಖಡಕ್ ಎಚ್ಚರಿಕೆ ನೀಡಿದೆ.
ಅಭದ್ರತೆ ಕಾರಣ ನೀಡಿ ಪಂದ್ಯಾವಳಿಯಿಂದ ಹಿಂದೆ ಸರಿದೆರೆ ಕಠಿಣ ಕಾನೂನು ಕ್ರಮ ಎದುರಿಸಲು ಸಿದ್ದರಾಗಿ ಎಂದು ಐಸಿಸಿ ಎಚ್ಚರಿಕೆ ನೀಡಿದೆ.
ಭಾರತದ ಭದ್ರತೆ ಬಗ್ಗೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಎತ್ತಿರುವ ಅಪಸ್ವರ ಆಧಾರ ರಹಿತ ಎಂದು ಐಸಿಸಿ ಛೀಮಾರಿ ಹಾಕಿದ್ದು, ಟಿ20 ಸರಣಿಗೆ ಬಿಸಿಸಿಐ ಒದಗಿಸುವ ಭದ್ರತೆ ಕುರಿತಂತೆ ಐಸಿಸಿ ತೃಪ್ತಿ ವ್ಯಕ್ತಪಡಿಸಿದೆ.
ಪಿಸಿಬಿಯ ದ್ವಂದ್ವ ಧೋರಣೆಯನ್ನೂ ಬಯಲು ಮಾಡಿರುವ ಐಸಿಸಿ, ಗುವಾಹಟಿಯಲ್ಲಿ ನಡೆದ ಸೌತ್ ಏಶಿಯನ್ ಗೇಮ್ಸ್ ಗಾಗಿ 100 ಅಥ್ಲಿಟ್ ಗಳು ಭಾರತಕ್ಕೆ ಬಂದು ಹೋಗಲು ಸರ್ಕಾರ ಅನುಮತಿ ನೀಡಿದೆ. ಕೇವಲ 20 ಜನರು ವಿಶ್ವಕಪ್ ಬಂದು ಹೋಗಲು ಅಲ್ಲಿನ ಸರ್ಕಾರ ಅನುಮತಿ ನೀಡುವುದಿಲ್ಲ ಎಂಬುದಕ್ಕೆ ಯಾವುದೇ ಕಾರಣವಿಲ್ಲ ಎಂದು ಐಸಿಸಿ ಅಧಿಕಾರಿಯೊಬ್ಬರು ಅಭಿಪ್ರಾಯಪಟ್ಟಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


