ಟಿ20 ವಿಶ್ವಕಪ್ಗೆ ಟೀಂ ಇಂಡಿಯಾ ಪ್ರಬಲ ಸ್ಪರ್ಧಿ: ಧೋನಿ ವಿಶ್ವಾಸ
ಆಸ್ಟ್ರೇಲಿಯಾ ಹಾಗೂ ಶ್ರೀಲಂಕಾ ವಿರುದ್ಧದ ಟಿ20 ಸರಣಿ ಗೆದ್ದ ಹುಮ್ಮಸ್ಸಿನಲ್ಲಿರುವ ಟೀಂ ಇಂಡಿಯಾ ಮುಂಬರು ಟಿ20 ವಿಶ್ವಕಪ್ ಗೆ ಪ್ರಬಲ ಸ್ಪರ್ಧಿಯಾಗಿದೆ...

ವಿಶಾಖಪಟ್ಟಣ: ಆಸ್ಟ್ರೇಲಿಯಾ ಹಾಗೂ ಶ್ರೀಲಂಕಾ ವಿರುದ್ಧದ ಟಿ20 ಸರಣಿ ಗೆದ್ದ ಹುಮ್ಮಸ್ಸಿನಲ್ಲಿರುವ ಟೀಂ ಇಂಡಿಯಾ ಮುಂಬರು ಟಿ20 ವಿಶ್ವಕಪ್ ಗೆ ಪ್ರಬಲ ಸ್ಪರ್ಧಿಯಾಗಿದೆ ಎಂದು ನಾಯಕ ಎಂಎಸ್ ಧೋನಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಲಂಕಾ ವಿರುದ್ಧದ ಟಿ20 ಸರಣಿ ಗೆಲುವಿನ ಬಳಿಕ ಮಾತನಾಡಿದ ಧೋನಿ, ಬೌಲರ್ಗಳು ಚುಟುಕು ಕ್ರಿಕೆಟ್ನಲ್ಲಿ ಈಗಾಗಲೆ ಸದೃಢ ಬೌಲಿಂಗ್ ಪ್ರದರ್ಶಿಸಿದ್ದರೂ, ಮಧ್ಯಮ ಕ್ರಮಾಂಕದ ಬ್ಯಾಟ್ಸ್ಮನ್ಗಳಿಗೆ ಇನ್ನೂ ಸೂಕ್ತ ಅವಕಾಶ ಲಭಿಸದಿರುವುದು ಹಿನ್ನಡೆಯಾಗಿದೆ ಎಂಬುದನ್ನೂ ಧೋನಿ ಒಪ್ಪಿಕೊಂಡಿದ್ದಾರೆ.
ಇದೇ ವೇಳೆ ಮಾರ್ಚ್ 8 ರಿಂದ ತವರಿನಲ್ಲೇ ನಡೆಯಲಿರುವ ಟಿ20 ವಿಶ್ವಕಪ್ನಲ್ಲಿ ತವರಿನ ವಾತಾವರಣ ಲಾಭದಾಯಕವೆನಿಸಲಿದೆ ಎಂದು ಧೋನಿ ಹೇಳಿದ್ದಾರೆ. ಈ ಬಾರಿ ಭಾರತದಲ್ಲೇ ನಡೆಯಲಿರುವ ಟೂರ್ನಿಯಲ್ಲಿ ಸ್ಪಿನ್ನರ್ಗಳೂ ಪ್ರಮುಖ ಪಾತ್ರ ನಿರ್ವಹಿಸಲಿದ್ದಾರೆ. ಐಪಿಎಲ್ ಅನುಭವವೂ ಇಲ್ಲಿ ಲಾಭದಾಯಕ’ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


