ಕ್ರೀಡೆ

ಏಷ್ಯಾಕಪ್: ಇಂದು ಸಾಂಪ್ರದಾಯಿಕ ಎದುರಾಳಿಗಳಾದ ಇಂಡೋ-ಪಾಕ್ ಕ್ರಿಕೆಟ್ ಕದನ

ಕಳೆದ ವರ್ಷ ಐಸಿಸಿ ವಿಶ್ವಕಪ್ ಪಂದ್ಯಾವಳಿಯ ಅಡಿಲೇಡ್ ಪಂದ್ಯದಲ್ಲಿ ಪರಸ್ಪರ ಸೆಣಸಿದ್ದ ಕ್ರಿಕೆಟ್ ಜಗತ್ತಿನಲ್ಲಿ ಬದ್ಧವೈರಿಗಳಾದ ಭಾರತ-ಪಾಕಿಸ್ತಾನ ತಂಡಗಳು ಇಂದು...

ಏಷ್ಯಾಕಪ್: ಇಂದು ಸಾಂಪ್ರದಾಯಿಕ ಎದುರಾಳಿಗಳಾದ ಇಂಡೋ-ಪಾಕ್ ಕ್ರಿಕೆಟ್ ಕದನ
ಭಾರತ, ಪಾಕಿಸ್ತಾನ
Published On :

ಢಾಕಾ: ಕಳೆದ ವರ್ಷ ಐಸಿಸಿ ವಿಶ್ವಕಪ್ ಪಂದ್ಯಾವಳಿಯ ಅಡಿಲೇಡ್ ಪಂದ್ಯದಲ್ಲಿ ಪರಸ್ಪರ ಸೆಣಸಿದ್ದ  ಕ್ರಿಕೆಟ್ ಜಗತ್ತಿನಲ್ಲಿ ಬದ್ಧವೈರಿಗಳಾದ ಭಾರತ-ಪಾಕಿಸ್ತಾನ ತಂಡಗಳು ಇಂದು ಮುಖಾಮುಖಿಯಾಗಲಿವೆ.

ಏಷ್ಯಾ ಕಪ್ ಪಂದ್ಯಾವಳಿಯ ನಾಲ್ಕನೇಯ ಮಹತ್ವದ ಪಂದ್ಯದಲ್ಲಿ ಸಂಪ್ರದಾಯಿಕ ಎದುರಾಳಿಗಳು ಸೆಣಸಲಿದ್ದು ಪಂದ್ಯದ ತೀವ್ರತೆಯನ್ನು ಹೆಚ್ಚಿಸಿದೆ.

ಇತ್ತೀಚಿನ ಆಸ್ಟ್ರೇಲಿಯಾ ಹಾಗೂ ಶ್ರೀಲಂಕಾ ವಿರುದ್ಧದ ಸರಣಿಗಳಲ್ಲಿ ಗೆದ್ದಿರುವ ಟೀಂ ಇಂಡಿಯಾ ತಂಡ ಏಷ್ಯಾ ಕಪ್​ ಟೂರ್ನಿ ಗೆಲ್ಲುವ ಫೇವರಿಟ್​ ತಂಡವಾಗಿದ್ದು, ಯುವ ಆಟಗಾರರಿಂದ ಕೂಡಿರುವ ಶಾಹೀದ್​ ಆಫ್ರಿದಿ ಪಡೆ, ಭಾರತ ವಿರುದ್ದ ಗೆಲ್ಲುವ ವಿಶ್ವಾಸದಲ್ಲಿದೆ.

ಆದರೆ ಕಳೆದೆರಡು ಟಿ20 ಸರಣಿಯಲ್ಲಿ ಅಮೋಘ ಪ್ರದರ್ಶನ ನೀಡಿರುವ ಭಾರತ ತಂಡ, ಪಾಕಿಸ್ತಾನದ ವಿರುದ್ಧ ಭರ್ಜರಿ ಜಯ ದಾಖಲಿಸುವ ತವಕದಲ್ಲಿದೆ. ಭಾರತ ತಂಡದಲ್ಲಿರುವ ಎಲ್ಲ ಆಟಗಾರರು ಅದ್ಭುತ ಫಾರ್ಮನಲ್ಲಿದ್ದು, ತಂಡ ಸಮತೋಲದಿಂದ ಕೂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.