ವಾಲಿಬಾಲ್ ಸೆಣಸಿಗೆ ಉದ್ಯಾನ ನಗರಿ ಸಜ್ಜು
ಆತಿಥೇಯ ಕರ್ನಾಟಕ ಮತ್ತು ರಾಜಸ್ಥಾನ ತಂಡಗಳು, ಜನವರಿ ರಂದು ಆರಂಭವಾಗಲಿರುವ 64ನೇ ರಾಷ್ಟ್ರೀಯ ಹಿರಿಯರ ವಾಲಿಬಾಲ್ ಚಾಂಪಿಯನ್‌ಷಿಪ್‌ನ ...

ಬೆಂಗಳೂರು: ಆತಿಥೇಯ ಕರ್ನಾಟಕ ಮತ್ತು ರಾಜಸ್ಥಾನ ತಂಡಗಳು, ಜನವರಿ ರಂದು ಆರಂಭವಾಗಲಿರುವ 64ನೇ ರಾಷ್ಟ್ರೀಯ ಹಿರಿಯರ ವಾಲಿಬಾಲ್ ಚಾಂಪಿಯನ್‌ಷಿಪ್‌ನ ಪುರುಷರ ವಿಭಾಗದ ಉದ್ಘಾಟನಾ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ.
ಇಲ್ಲಿ ಶ್ರೀ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ 9 ದಿನಗಳ ಕಾಲ ನಡೆಯಲಿರುವ ಚಾಂಪಿಯನ್‌ಷಿಪ್‌ನ ಪುರುಷರ ವಿಭಾಗದಲ್ಲಿ 27 ಹಾಗೂ ಮಹಿಳಾ ವಿಭಾಗದಲ್ಲಿ 24 ತಂಡಗಳು ಪ್ರಶಸ್ತಿಗಾಗಿ ಸೆಣಸಾಡಲಿವೆ. ಚಾಂಪಿಯನ್‌ಷಿಪ್‌ನಲ್ಲಿ ಹಲವಾರು ಅಂತಾರಾಷ್ಟ್ರೀಯ ತಾರೆಗಳ ಸಹಿತ ವಿವಿಧ ತಂಡಗಳ 1500ಕ್ಕೂ ಹೆಚ್ಚು ಆಟಗಾರ/ಆಟಗಾರ್ತಿಯರು ಭಾಗವಹಿಸಲಿದ್ದಾರೆ. ಮಹಿಳಾ ವಿಭಾಗದ ಆರಂಭಿಕ ಪಂದ್ಯದಲ್ಲಿ ಭಾರತೀಯ ರೈಲ್ವೆ ಮತ್ತು ಮಹಾರಾಷ್ಟ್ರ ತಂಡಗಳು ಸೆಣಸಲಿವೆ.
ಶನಿವಾರ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಸಂಜೆ 5ಕ್ಕೆ ಟೂರ್ನಿಯ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಕೇಂದ್ರ ಕಾನೂನು ಸಚಿವ ಡಿ.ವಿ.ಸದಾನಂದ ಗೌಡ, ರಾಜ್ಯ ಸಚಿವರಾದ ಆರ್.ರೋಷನ್ ಬೇಗ್, ರಾಮಲಿಂಗಾ ರೆಡ್ಡಿ, ಕೆ.ಅಭಯಚಂದ್ರ ಜೈನ್ ಮತ್ತು ಮೇಯರ್ ಬಿ.ಎನ್.ಮಂಜುನಾಥ ರೆಡ್ಡಿ ಪಾಲ್ಗೊಳ್ಳಲಿದ್ದಾರೆ. ಉದ್ಘಾಟನಾ ಸಮಾರಂಭದ ಬಳಿಕ 6 ಗಂಟೆಗೆ ಪಂದ್ಯಗಳು ಆರಂಭವಾಗಲಿವೆ.
ಪುರುಷರ ವಿಭಾಗದಲ್ಲಿ ಕರ್ನಾಟಕ ತಂಡ ತಮಿಳುನಾಡು, ರಾಜಸ್ಥಾನ್ ಮತ್ತು ಸರ್ವಿಸಸ್ ತಂಡಗಳೊಂದಿಗೆ ಬಿ ಗುಂಪಿನಲ್ಲಿ ಸ್ಥಾನ ಪಡೆದಿದೆ. ಮಹಿಳಾ ವಿಭಾಗದಲ್ಲಿ ರಾಜ್ಯ ತಂಡ ಛತ್ತೀಸ್‌ಗಢ, ತ್ರಿಪುರಾ ಹಾಗೂ ಒಡಿಶಾ ತಂಡಗಳ ಜತೆ ಸಿ ಗುಂಪಿನಲ್ಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


