ಕೋಚ್ ಸ್ಥಾನ ತೃಪ್ತಿ ತಂದಿದೆ
ಅಂತಾರಾಷ್ಟ್ರೀಯ ಕ್ರಿಕೆಟ್ ವೃತ್ತಿಜೀವನಕ್ಕೆ 2012ರಲ್ಲಿ ವಿದಾಯ ಹೇಳಿದ ಟೀಂ ಇಂಡಿಯಾ ಗೋಡೆ ಖ್ಯಾತಿಯ ರಾಹುಲ್ ದ್ರಾವಿಡ್, ನಿವೃತ್ತಿ ನಂತರ ಭಾರತ 'ಎ' ಮತ್ತು 19...

ನವದೆಹಲಿ: ಅಂತಾರಾಷ್ಟ್ರೀಯ ಕ್ರಿಕೆಟ್ ವೃತ್ತಿಜೀವನಕ್ಕೆ 2012ರಲ್ಲಿ ವಿದಾಯ ಹೇಳಿದ ಟೀಂ ಇಂಡಿಯಾ ಗೋಡೆ ಖ್ಯಾತಿಯ ರಾಹುಲ್ ದ್ರಾವಿಡ್, ನಿವೃತ್ತಿ ನಂತರ ಭಾರತ 'ಎ' ಮತ್ತು 19 ವರ್ಷದವರೊಳಗಿನ ತಂಡದ ಕೋಚ್ ಸ್ಥಾನದ ಜವಾಬ್ದಾರಿಯನ್ನು ಆನಂದಿಸುತ್ತಿರುವುದಾಗಿ ತಿಳಿಸಿದ್ದಾರೆ. ಅಲ್ಲದೆ ಯುವ ಒಲಿಂಪಿಕ್ಸ್ ಅಥ್ಲಿಟ್ ಗಳಿಗೆ ಮಾರ್ಗದರ್ಶನ ನೀಡುತ್ತಿದ್ದು, ಈ ಕೆಲಸ
ಸಾಕಷ್ಟು ತೃಪ್ತಿ ನೀಡುತ್ತಿದೆ ಎಂದಿದ್ದಾರೆ. 'ಎರಡು ಮೂರು ವರ್ಷಗಳ ಹಿಂದೆ ನಿವೃತ್ತಿ ನಂತರದ ಪಯಣ, ತಮಾಷೆ, ಉತ್ಸಾಹ ಮತ್ತು ಆನಂದಮಯವಾಗಿದೆ. ಕಿರಿಯರಿಗೆ ತರಬೇತುದಾರನಾಗಿರುವುದು ಇನ್ನಷ್ಟು ಸಂತೋಷ ತಂದಿದೆ. ನಾನು ನೆಮ್ಮದಿಯಾಗಿ ಕೆಲಸ ಮಾಡುವ ವಾತಾವರಣ ಇದಾಗಿದ್ದು, ಮುಂದಿನ ಪೀಳಿಗೆಯ ಪ್ರತಿಭೆಗಳ ಜತೆ ಕೆಲಸ ಮಾಡಬಹುದಾಗಿದೆ'' ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


