ಪ್ರಣವ್ ಧನಪಾಡೆಗೆ ಎಂಸಿಎ ವಿದ್ಯಾರ್ಥಿ ವೇತನ
ಅಂತರ ಶಾಲಾ ಕ್ರಿಕೆಟ್ ಪಂದ್ಯಾವಳಿಯಲ್ಲಿ ಅಜೇಯ 1009 ರನ್ ಗಳಿಸಿ ಅವಿಸ್ಮರಣೀಯ ವಿಶ್ವ ದಾಖಲೆ ನಿರ್ಮಿಸಿ ಕ್ರಿಕೆಟ್ ಲೋಕದಲ್ಲಿ ಸಂಚಲನ ಸೃಷ್ಟಿಸಿದ...

ಮುಂಬೈ: ಅಂತರ ಶಾಲಾ ಕ್ರಿಕೆಟ್ ಪಂದ್ಯಾವಳಿಯಲ್ಲಿ ಅಜೇಯ 1009 ರನ್ ಗಳಿಸಿ ಅವಿಸ್ಮರಣೀಯ ವಿಶ್ವ ದಾಖಲೆ ನಿರ್ಮಿಸಿ ಕ್ರಿಕೆಟ್ ಲೋಕದಲ್ಲಿ ಸಂಚಲನ ಸೃಷ್ಟಿಸಿದ ಮುಂಬೈನ ಪ್ರಣವ್ ಧನಪಾಡೆಗೆ ಮುಂಬೈ ಕ್ರಿಕೆಟ್ ಸಂಸ್ಥೆ (ಎಂಸಿಎ) ಪ್ರಾಯೋಜಕತ್ವದ ಜತೆಗೆ ವಿದ್ಯಾರ್ಥಿ ವೇತನ ನೀಡಲು ಮುಂದೆ ಬಂದಿದೆ. ಆಟೋ ರಿಕ್ಷಾ ಚಾಲಕ ಪ್ರಶಾಂತ್ ಎಂಬುವರ ಪುತ್ರ ಪ್ರಣವ್ ತೋರಿದ ಮಾಂತ್ರಿಕ ಬ್ಯಾಟಿಂಗ್‍ನಿಂದ ಸಂಪ್ರೀತಗೊಂಡಿರುವ ಎಂಸಿಎ ಐದು ವರ್ಷಗಳ ಕಾಲ ಆತನಿಗೆ ವಿದ್ಯಾರ್ಥಿ ವೇತನ ನೀಡುವುದಾಗಿ ಘೋಷಿಸಿದೆ. 'ಮುಂಬೈ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷರಾದ ಶರದ್ ಪವಾರ್ ಪವನ್ ಧನಪಾಡೆಗೆ ತಿಂಗಳಿಗೆ 10 ಸಾವಿರ ರೂ.ಗಳ ವಿದ್ಯಾರ್ಥಿ ವೇತನವನ್ನು ಘೋಷಿಸಿದ್ದಾರೆ ಅಲ್ಲದೆ, ಜನವರಿ 2016ರಿಂದ ಡಿಸೆಂಬರ್ 2021ರವರೆಗೆ ಈ ಧನ ಸಹಾಯ ನೀಡಲಾಗುತ್ತಿದೆ. ಈ ಅವಧಿಯಲ್ಲಿ ಪವನ್ ಧನಪಾಡೆಯ ಶೈಕ್ಷಣಿಕ ವಿದ್ಯಾಭ್ಯಾಸ ಹಾಗೂ ಕ್ರಿಕೆಟ್ ಚಟುವಟಿಕೆಗಳನ್ನು ಸೂಕ್ಷ್ಮವಾಗಿ ಅವಲೋಕಿಸಲಿದೆ'' ಎಂದು ಎಂಸಿಎ ಪ್ರಕಟಣೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


