ಮೊದಲ ಏಕದಿನ ಪಂದ್ಯ: ಆಸ್ಟ್ರೇಲಿಯಾಗೆ 5 ವಿಕೆಟ್‌ಗಳ ಭರ್ಜರಿ ಗೆಲುವು
ಆಸ್ಟ್ರೇಲಿಯಾದ ಪರ್ತ್‌ನಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಭಾರತದ ವಿರುದ್ಧ ಆಸ್ಟ್ರೇಲಿಯಾ ಐದು ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ.

Published On :
ಪರ್ತ್: ಆಸ್ಟ್ರೇಲಿಯಾದ ಪರ್ತ್‌ನಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಭಾರತದ ವಿರುದ್ಧ ಆಸ್ಟ್ರೇಲಿಯಾ ಐದು ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ.
ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸ್ ಮನ್ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಅಬ್ಬರದ ಬ್ಯಾಟಿಂಗ್ ನಿಂದಾಗಿ ಭಾರತ ಆಸ್ಟ್ರೇಲಿಯಾ ಗೆ 309 ರನ್ ಗಳ ಗುರಿ ನೀಡಿತ್ತು.
ಭಾರತದ ಬೃಹತ್ ಮೊತ್ತವನ್ನು ಬೆನ್ನತ್ತಿದ ಆಸೀಸ್ ಪಡೆ ನಾಯಕ ಸ್ಮಿತ್ ಮತ್ತು ಬೈಲಿ ಅವರ ಭರ್ಜರಿ ಶತಗಳ ನೆರವಿನಿಂದ 49. 2 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 310 ರನ್ ಗಳಿಸುವ ಮೂಲಕ ಭರ್ಜರಿ ಗೆಲುವು ಸಾಧಿಸಿತು.
ಮೊದಲ ಪಂದ್ಯದಲ್ಲೇ ಪಂಜಾಬಿನ ಎಡಗೈ ವೇಗಿ ಬರೀಂದರ್ ಸಿಂಗ್ ಸ್ರಾಸ್ ಅವರು ಆಸೀಸ್‌ಗೆ ಆರಂಭಿಕ ಆಘಾತ ನೀಡುವ ಮೂಲಕ 3 ವಿಕೆಟ್ ಪಡೆದರೆ, ಆರ್ ಅಶ್ವಿನ್ ಅವರು ಎರಡು ವಿಕೆಟ್ ಪಡೆದರು.
ನಿಗದಿತ ಓವರ್ ಗಳಲ್ಲಿ ಭಾರತ 3 ವಿಕೆಟ್ ನಷ್ಟಕ್ಕೆ 309 ರನ್ ಗಳಿಸಿತು. ಆಸ್ಟ್ರೇಲಿಯಾ ಬೌಲರ್ಗಳನ್ನು ಸಮರ್ಥವಾಗಿ ಎದುರಿಸಿದ ಆರಂಭಿಕ ಬ್ಯಾಟ್ಸ್ಮನ್ ರೋಹಿತ್ ಶರ್ಮಾ ಅಜೇಯ 171 ರನ್ ಗಳಿಸಿ ಮಿಂಚಿದರು. ಇವರಿಗೆ ದ್ವಿಶತಕದ ಜತೆಯಾಟದಲ್ಲಿ ಸಾತ್ ನೀಡಿದ ವಿರಾಟ್ ಕೊಹ್ಲಿ (91) ಶತಕದಂಚಿನಲ್ಲಿ ಎಡವಿ ಶತಕ ವಂಚಿತರಾದರು.
ಟೀಂ ಇಂಡಿಯಾ ಪರ ಶಿಖರ್ ಧವನ್ 91, ಎಂಎಸ್ ಧೋನಿ 18, ರವೀಂದ್ರ ಜಡೇಜಾ ಅಜೇಯ 10 ರನ್ ಗಳಿಸಿದ್ದಾರೆ.
ಆಸ್ಟ್ರೇಲಿಯಾ ಪರ ಫಾಲ್ಕ್ನರ್ (2) ಮತ್ತು ಹ್ಯಾಸಲ್ ವುಡ್ (1) ವಿಕೆಟ್ ಪಡೆದರು
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


