ಈ ವರ್ಷ ಭಾರತ-ಪಾಕ್ ಕ್ರಿಕೆಟ್ ಸರಣಿ ಇಲ್ಲ: ಅನುರಾಗ್ ಠಾಕೂರ್
ಈ ವರ್ಷ ಭಾರತ-ಪಾಕಿಸ್ತಾನ ಕ್ರಿಕೆಟ್ ಸರಣಿ ಆಯೋಜಿಸುವ ಯಾವುದೇ ಉದ್ದೇಶ ಇಲ್ಲ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)...

Published On :
ನವದೆಹಲಿ: ಈ ವರ್ಷ ಭಾರತ-ಪಾಕಿಸ್ತಾನ ಕ್ರಿಕೆಟ್ ಸರಣಿ ಆಯೋಜಿಸುವ ಯಾವುದೇ ಉದ್ದೇಶ ಇಲ್ಲ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಕಾರ್ಯದರ್ಶಿ ಅನುರಾಗ್ ಠಾಕೂರ್ ಅವರು ಮಂಗಳವಾರ ಸ್ಪಷ್ಟಪಡಿಸಿದ್ದಾರೆ.
'ಪಾಕಿಸ್ತಾನ ಜೊತೆ ಯಾವುದೇ ಸರಣಿ ನಡೆಸುವ ಉದ್ದೇಶ ಇಲ್ಲ. ಬಹು ರಾಷ್ಟ್ರೀಯ ಪಂದ್ಯಗಳಲ್ಲಿ ಮಾತ್ರ ಭಾರತ ಪಾಕ್ ವಿರುದ್ಧ ಸೆಣಸಲಿದೆ' ಎಂದು ಠಾಕೂರ್ ತಿಳಿಸಿದ್ದಾರೆ.
ಕಳೆದ ವರ್ಷ ಡಿಸೆಂಬರ್‌ನಲ್ಲಿ ಭಾರತ-ಪಾಕ್ ಪಂದ್ಯ ನಡೆಸಲು ಉದ್ದೇಶಿಸಲಾಗಿತ್ತು. ಆದರೆ ಇದಕ್ಕೆ ಉಭಯ ದೇಶಗಳ ಸರ್ಕಾರ ಒಪ್ಪಿಗೆ ನೀಡದ ಹಿನ್ನೆಲೆಯಲ್ಲಿ ಪಂದ್ಯ ಆಯೋಜಿಸುವ ನಿರ್ಧಾರ ಕೈಬಿಡಲಾಗಿತ್ತು.
ಇದೇ ವೇಳೆ ಪರ್ತ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಸೋಲಿನ ಬಗ್ಗೆ ಪ್ರತಿಕ್ರಿಸಿದ ಠಾಕೂರ್, ಆರಂಭಿಕ ಪಂದ್ಯದಲ್ಲಿ ಸೋತಿರುವುದು ದುರದೃಷ್ಟಕರ ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


