ಕ್ರೀಡೆ

ಆಸ್ಟ್ರೇಲಿಯಾಗೆ 310 ರನ್ ಬೃಹತ್ ಮೊತ್ತದ ಗುರಿ

ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸ್ ಮನ್ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಅಬ್ಬರದ ಬ್ಯಾಟಿಂಗ್ ನಿಂದಾಗಿ ಆಸ್ಟ್ರೇಲಿಯಾ ವಿರುದ್ಧ ಭಾರತ 309 ರನ್ ಗಳ ಬೃಹತ್...

ಆಸ್ಟ್ರೇಲಿಯಾಗೆ 310 ರನ್ ಬೃಹತ್ ಮೊತ್ತದ ಗುರಿ
ರೋಹಿತ್ ಶರ್ಮಾ
Published On :
ಪರ್ತ್: ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸ್ ಮನ್ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಅಬ್ಬರದ ಬ್ಯಾಟಿಂಗ್ ನಿಂದಾಗಿ ಆಸ್ಟ್ರೇಲಿಯಾ ವಿರುದ್ಧ ಭಾರತ 309 ರನ್ ಗಳ ಬೃಹತ್ ಮೊತ್ತ ಕಲೆ ಹಾಕಿದೆ.
ಪರ್ತ್ ನಲ್ಲಿ ನಡೆಯುತ್ತಿರುವ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 309 ರನ್ ಗಳ ಕಳೆ ಹಾಕಿದ್ದು, ಆಸ್ಟ್ರೇಲಿಯಾಗೆ 310 ರನ್ ಗಳ ಬೃಹತ್ ಮೊತ್ತದ ಗುರಿ ನೀಡಿದೆ.
ನಿಗದಿತ ಓವರ್ ಗಳಲ್ಲಿ ಭಾರತ 3 ವಿಕೆಟ್ ನಷ್ಟಕ್ಕೆ 309 ರನ್ ಗಳಿಸಿತು. ಆಸ್ಟ್ರೇಲಿಯಾ ಬೌಲರ್​ಗಳನ್ನು ಸಮರ್ಥವಾಗಿ ಎದುರಿಸಿದ ಆರಂಭಿಕ ಬ್ಯಾಟ್ಸ್​ಮನ್ ರೋಹಿತ್ ಶರ್ಮಾ ಅಜೇಯ 171 ರನ್ ಗಳಿಸಿ ಮಿಂಚಿದರು. ಇವರಿಗೆ ದ್ವಿಶತಕದ ಜತೆಯಾಟದಲ್ಲಿ ಸಾತ್ ನೀಡಿದ ವಿರಾಟ್ ಕೊಹ್ಲಿ (91) ಶತಕದಂಚಿನಲ್ಲಿ ಎಡವಿ ಶತಕ ವಂಚಿತರಾದರು.
ಟೀಂ ಇಂಡಿಯಾ ಪರ ಶಿಖರ್ ಧವನ್ 91, ಎಂಎಸ್ ಧೋನಿ 18, ರವೀಂದ್ರ ಜಡೇಜಾ ಅಜೇಯ 10 ರನ್ ಗಳಿಸಿದ್ದಾರೆ.
ಆಸ್ಟ್ರೇಲಿಯಾ ಪರ ಫಾಲ್ಕ್​ನರ್ (2) ಮತ್ತು ಹ್ಯಾಸಲ್ ವುಡ್ (1) ವಿಕೆಟ್ ಪಡೆದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.