ಕ್ರೀಡೆ

ಆಸ್ಟ್ರೇಲಿಯ ವಿರುದ್ಧ 4ನೇ ಶತಕ ಸಿಡಿಸಿದ ರೋಹಿತ್

ಆಸ್ಟ್ರೇಲಿಯಾ ವಿರುದ್ಧದ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಸ್ಫೋಟಕ ಬ್ಯಾಟ್ಸ್ ಮನ್ ರೋಹಿತ್ ಶರ್ಮಾ ಭರ್ಜರಿ ಶತಕ ದಾಖಲಿಸಿದ್ದಾರೆ...

ಆಸ್ಟ್ರೇಲಿಯ ವಿರುದ್ಧ 4ನೇ ಶತಕ ಸಿಡಿಸಿದ ರೋಹಿತ್
ರೋಹಿತ್ ಶರ್ಮಾ
Published On :

ಪರ್ತ್: ಆಸ್ಟ್ರೇಲಿಯಾ ವಿರುದ್ಧದ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಸ್ಫೋಟಕ ಬ್ಯಾಟ್ಸ್ ಮನ್ ರೋಹಿತ್ ಶರ್ಮಾ ಭರ್ಜರಿ ಶತಕ ದಾಖಲಿಸಿದ್ದಾರೆ.

ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ ಪರ ಶಿಖರ್ ಧವನ್ 9 ರನ್ ಗಳಿಸಿ ಔಟಾದರು. ಈ ವೇಳೆ ಉಪನಾಯಕ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಉತ್ತಮವಾಗಿ ಬ್ಯಾಟ್ ಮಾಡುತ್ತಿದ್ದು, 122 ಎಸೆತಗಳಲ್ಲಿ ರೋಹಿತ್ ಶತಕ ಸಿಡಿಸಿದ್ದಾರೆ. ಇನ್ನು ಕೊಹ್ಲಿ 82 ಎಸೆತಗಳಲ್ಲಿ 76 ರನ್ ಗಳಿಸಿದ್ದಾರೆ. ಇದರೊಂದಿಗೆ ಭಾರತ 40 ಓವರ್ ಗಳ ಮುಕ್ತಾಯಕ್ಕೆ 1 ವಿಕೆಟ್ ನಷ್ಟಕ್ಕೆ 216 ರನ್ ಗಳಿಸಿದ್ದಾರೆ.

9 ಶತಕಗಳನ್ನು ಪೂರೈಸಿರುವ ರೋಹಿತ್ ಶರ್ಮಾ ಆಸ್ಟ್ರೇಲಿಯಾ ವಿರುದ್ಧ 4 ಶತಕಗಳನ್ನು ಸಿಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.