ಕ್ರೀಡೆ

ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ ಎರಡನೇ ಸೋಲು: ರೋಹಿತ್ ಶರ್ಮಾ ಶತಕ ವ್ಯರ್ಥ

ಆಸ್ಟ್ರೇಲಿಯಾ ವಿರುದ್ಧದ ಎರಡನೇ ಪಂದ್ಯದಲ್ಲೂ ರೋಹಿತ್ ಶರ್ಮಾ ಅವರ ಶತಕ ವ್ಯರ್ಥವಾಗಿದ್ದು ಭಾರತ ತಂಡ ಸೋಲನುಭವಿಸಿದೆ.

ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ ಎರಡನೇ ಸೋಲು: ರೋಹಿತ್ ಶರ್ಮಾ ಶತಕ ವ್ಯರ್ಥ
ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ ಎರಡನೇ ಸೋಲು
Published On :

ಬ್ರಿಸ್ಬೇನ್: ಆಸ್ಟ್ರೇಲಿಯಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲೂ ರೋಹಿತ್ ಶರ್ಮಾ ಅವರ ಶತಕ ವ್ಯರ್ಥವಾಗಿದ್ದು ಭಾರತ ತಂಡ ಸೋಲನುಭವಿಸಿದೆ.

ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಭಾರತ ತಂಡ 8 ವಿಕೆಟ್ ನಷ್ಟಕ್ಕೆ ಆಸ್ಟ್ರೇಲಿಯಾಗೆ 308 ಗುರಿ ನೀಡಿತ್ತು. ಭಾರತ ನೀಡಿದ್ದ ದಾಖಲೆಯ ಗುರಿಯನ್ನು ಸುಲಭವಾಗಿ ತಲುಪಿದ ಆಸ್ಟ್ರೇಲಿಯಾ ತಂಡ, ಐದು ಪಂದ್ಯಗಳ ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿದೆ.

ಆರನ್ ಫಿಂಚ್, ಶೂನ್ ಮಾರ್ಷ್, ಜಾರ್ಜ್ ಬೈಲಿ ಉತ್ತಮ ಪ್ರದರ್ಶನದಿಂದ ಆಸ್ಟ್ರೇಲಿಯಾ ತಂಡ ಭಾರತದ ವಿರುದ್ಧ ಎರಡನೇ ಪಂದ್ಯದಲ್ಲೂ ಸುಲಭವಾಗಿ ಜಯ ಸಾಧಿಸಿತು. ಇನ್ನು ಭಾರತದ ರೋಹಿತ್ ಶರ್ಮಾ ಅವರ ಶತಕ, ವಿರಾಟ್ ಕೊಹ್ಲಿ ಅವರ ಅರ್ಧಶತಕ ವ್ಯರ್ಥವಾಯಿತು. ಸತತ ಎರಡನೇ ಪಂದ್ಯದಲ್ಲೂ ಆಸ್ಟ್ರೇಲಿಯಾ ಗೆಲುವು ಸಾಧಿಸಿದ್ದು ಮುಂದಿನ ಪಂದ್ಯ ಭಾರತದ ಪಾಲಿಗೆ ನಿರ್ಣಾಯಕವಾಗಲಿದೆ. ಮೊದಲ 20 ಓವರ್ ಗಳಲ್ಲಿ ಭಾರತ ಪಂದ್ಯದ ಮೇಲೆ ಹಿಡಿತ ಸಾಧಿಸಿತ್ತಾದರೂ ಶೌನ್ ಮಾರ್ಷ್ ಅವರ ವಿಕೆಟ್ ಪಡೆಯಲು ಸಿಕ್ಕಿದ್ದ ನಾಲ್ಕು ಅವಕಾಶವನ್ನು ಕೈಚೆಲ್ಲಿದ್ದರ ಪರಿಣಾಮ ಭಾರತ ಪಂದ್ಯದ ಮೇಲಿನ ಹಿಡಿತ ಕಡೆದುಕೊಳ್ಳಬೇಕಾಯಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.