ಆಸ್ಟ್ರೇಲಿಯಾಕ್ಕೆ 296 ರನ್ ಗಳ ಟಾರ್ಗೆಟ್, ಕೊಹ್ಲಿ ಶತಕ
ಆಸ್ಟ್ರೇಲಿಯಾ ವಿರುದ್ಧದ ಮಾಡು ಇಲ್ಲವೆ ಮಡಿ ಪಂದ್ಯದಲ್ಲಿ ಟೀಂ ಇಂಡಿಯಾ 6 ವಿಕೆಟ್ ನಷ್ಟಕ್ಕೆ 295 ರನ್ ಗಳನ್ನು ಗಳಿಸಿದ್ದು, ಆಸ್ಟ್ರೇಲಿಯಾಗೆ 296 ರನ್ ಗಳ ಗುರಿ ನೀಡಿದೆ...

ಮೆಲ್ಬೋರ್ನ್: ಆಸ್ಟ್ರೇಲಿಯಾ ವಿರುದ್ಧದ ಮಾಡು ಇಲ್ಲವೆ ಮಡಿ ಪಂದ್ಯದಲ್ಲಿ ಟೀಂ ಇಂಡಿಯಾ 6 ವಿಕೆಟ್ ನಷ್ಟಕ್ಕೆ 295 ರನ್ ಗಳನ್ನು ಗಳಿಸಿದ್ದು, ಆಸ್ಟ್ರೇಲಿಯಾಗೆ 296 ರನ್ ಗಳ ಗುರಿ ನೀಡಿದೆ.
ಮೊಲ್ಬೋರ್ನ್ ನಲ್ಲಿ ನಡೆಯುತ್ತಿರುವ ಮೂರನೇ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಆರಂಭಿಕವಾಗಿ ಕಣಕ್ಕಿಳಿದ ರೋಹಿತ್ ಶರ್ಮಾ ಕಳೆದ ಎರಡು ಪಂದ್ಯಗಳಲ್ಲಿ ಶತಕ ಸಿಡಿಸಿದ್ದು, ಈ ಬಾರಿ 6 ರನ್ ಗಳಿಗೆ ಔಟ್ ಆಗಿ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದರು.
ಭಾರತದ ಸ್ಫೋಟಕ ಬ್ಯಾಟ್ಸ್ ಮನ್ ಶಿಖರ್ ಧವನ್ ಮತ್ತು ವಿರಾಟ್ ಕೊಹ್ಲಿ ತಂಡಕ್ಕೆ ಆಸರೆಯಾದರು. ಮೊದಲೆರಡು ಪಂದ್ಯಗಳಲ್ಲಿ ವಿಫಲರಾಗಿದ್ದ ಧವನ್ ಈ ಪಂದ್ಯದಲ್ಲಿ 68 ರನ್ ಗಳಿಸಿ ಮಿಂಚಿದರು. ಧವನ್ ಔಟಾದ ನಂತರ ಕೊಹ್ಲಿ ಜತೆಗೂಡಿ ಅಜಿಂಕ್ಯ ರಹಾನೆ (50) ಅರ್ಧ ಶತಕ ಗಳಿಸಿದರು. ಕ್ರೀಸ್ನಲ್ಲಿ ಗಟ್ಟಿಯಾಗಿ ನೆಲೆ ನಿಂತ ವಿರಾಟ್ ಕೊಹ್ಲಿ (117) ಆಕರ್ಷಕ ಶತಕ ಸಿಡಿಸಿ ದಾಖಲೆ ನಿರ್ಮಿಸಿದರು.
ಆಸ್ಟ್ರೇಲಿಯಾ ಪರ ಹಸ್ಟೀಂಗ್ಸ್ 4, ಫಾಕ್ಲನರ್ ಹಾಗೂ ರಿಚರ್ಡ್ ಸನ್ ತಲಾ 1 ವಿಕೆಟ್ ಪಡೆದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


