ವಿರಾಟ್ ಕೊಹ್ಲಿಗೆ ನಾಯಕನ ಸ್ಥಾನ ನೀಡಲು ಕಾಲ ಸನ್ನಿಹಿತ?
ಆಸ್ಟ್ರೇಲಿಯಾ ವಿರುದ್ಧ ನಡೆದ ಏಕದಿನ ಸರಣಿಯಲ್ಲಿ ಸತತ ಮೂರು ಸೋಲುಗಳನ್ನು ಅನುಭವಿಸಿರುವ ಭಾರತ ತಂಡದಲ್ಲಿ ನಾಯಕತ್ವ ಬದಲಾವಣೆಗೆ...

Published On :
ನವದೆಹಲಿ: ಆಸ್ಟ್ರೇಲಿಯಾ ವಿರುದ್ಧ ನಡೆದ ಏಕದಿನ ಸರಣಿಯಲ್ಲಿ ಸತತ ಮೂರು ಸೋಲುಗಳನ್ನು ಅನುಭವಿಸಿರುವ ಭಾರತ ತಂಡದಲ್ಲಿ ನಾಯಕತ್ವ ಬದಲಾವಣೆಗೆ ಕಾಲ ಸನ್ನಿಹಿತವಾಗಿದ.
ಅಂದ ಹಾಗೆ ಮೂರು ಸೋಲುಗಳ ನಂತರ ಮಹೇಂದ್ರ ಸಿಂಗ್ ಧೋನಿಯನ್ನು ನಾಯಕತ್ವದಿಂದ ಕೆಳಗಿಳಿಸಿ, ವಿರಾಟ್ ಕೊಹ್ಲಿಗೆ ಪಟ್ಟ ಕಟ್ಟುವ ಬಗ್ಗೆ ಮಾತುಗಳು ಕೇಳಿಬರುತ್ತಿವೆ.
ಈ ಬಗ್ಗೆ ಸುದ್ದಿ ಮಾಧ್ಯಮವೊಂದರಲ್ಲಿ ಮಾತನಾಡಿದ ಮಾಜಿ ಕ್ರಿಕೆಟಿಗ ಕೃಷ್ಣಮಾಚಾರಿ ಶ್ರೀಕಾಂತ್, ಧೋನಿ ನಾಯಕ ಸ್ಥಾನದಿಂದ ಕೆಳಗಿಳಿಯಬೇಕಾಗಿದೆ ಎಂದಿದ್ದಾರೆ.
2015 ಧೋನಿ ಪಾಲಿಗೆ ಮರೆಯಲಾಗದ ವರ್ಷವಾಗಿತ್ತು. 2015ರಲ್ಲಿ ವಿಶ್ವ ಕಪ್ ಪಂದ್ಯದ ನಂತರ ಬಾಂಗ್ಲಾದೇಶ ವಿರುದ್ಧ ಏಕದಿನ ಪಂದ್ಯದಳಲ್ಲಿ ಭಾರತ ಪರಾಭವಗೊಂಡಿತು. ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಪಂದ್ಯ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ ಟಿ 20 ಪಂದ್ಯದಲ್ಲಿಯೂ ಭಾರತ ಸೋತಿತ್ತು.
ನಾಯಕತ್ವ ಮಾತ್ರ ಅಲ್ಲ, ಧೋನಿ ಬ್ಯಾಟಿಂಗ್‌ನಲ್ಲಿಯೂ ಕುಸಿತ ಕಂಡಿದೆ. ಆಸ್ಟ್ರೇಲಿಯಾ ವಿರುದ್ಧ ಪಂದ್ಯದಲ್ಲಿಯೂ ಧೋನಿ ಉತ್ತಮ ಫಿನಿಶರ್ ಆಗಿರಲಿಲ್ಲ. ಮೂರನೇ ಏಕದಿನ ಪಂದ್ಯದಲ್ಲಿ ಧೋನಿ 8 ಬಾಲ್‌ಗಳಲ್ಲಿ 23 ರನ್ ಗಳಿಸಿರುವುದೇ ಅವರ ಉತ್ತಮ ಆಟವಾಗಿತ್ತು. ಮೂರು ಪಂದ್ಯಗಳಲ್ಲಿ ಅವರು ಗಳಿಸಿದ್ದು ಕೇವಲ 52 ರನ್ ಅಷ್ಟೇ.
ಇತ್ತ ವಿರಾಟ್ ಕೊಹ್ಲಿ, ಮೂರು ಏಕದಿನ ಪಂದ್ಯಗಳಲ್ಲಿ ಒಂದು ಶತಕ ಮತ್ತು ಎರಡು ಅರ್ಧ ಶತಕಗಳನ್ನು ಬಾರಿಸಿದ್ದಾರೆ ಎಂದಿದ್ದಾರೆ ಶ್ರೀಕಾಂತ್.
ಐಸಿಸಿ ವಿಶ್ವ ಟಿ20 ಪಂದ್ಯಕ್ಕೆ ಇನ್ನು ಕೆಲವೇ ತಿಂಗಳುಗಳು ಉಳಿದಿರುವಾಗ ಧೋನಿಯನ್ನು ನಾಯಕ ಸ್ಥಾನದಿಂದ ಇಳಿಸಿ ಕೊಹ್ಲಿಗೆ ಆ ಹೊಣೆ ನೀಡಬೇಕೆಂದು ಕೆಲವರು ವಾದಿಸತೊಡಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


