ಆಸ್ಟ್ರೇಲಿಯಾ ವಿರುದ್ಧ ಇಂಡಿಯಾಗೆ 4ನೇ ಸತತ ಸೋಲು, ವೈಟ್ವಾಷ್ ಭೀತಿ
ಸತತ ಸೋಲುಗಳಿಂದ ಕಂಗೆಟ್ಟಿರುವ ಟೀಂ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧದ ನಾಲ್ಕನೇ ಪಂದ್ಯದಲ್ಲೂ ಸೋಲು ಅನುಭವಿಸಿದೆ...
ಕ್ಯಾನ್ ಬೆರಾ: ಸತತ ಸೋಲುಗಳಿಂದ ಕಂಗೆಟ್ಟಿರುವ ಟೀಂ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧದ ನಾಲ್ಕನೇ ಪಂದ್ಯದಲ್ಲೂ ಸೋಲು ಅನುಭವಿಸಿದೆ.
ಕ್ಯಾನ್ ಬೆರಾದಲ್ಲಿ ನಾಲ್ಕನೇ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ನಿಗದಿತ 50 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ ಆಸ್ಟ್ರೇಲಿಯಾ 349 ರನ್ ಕಲೆ ಹಾಕಿತು. 350 ರನ್ ಬೆನ್ನತ್ತಿದ ಟೀಂ ಇಂಡಿಯಾಗೆ ಆರಂಭಿಕ ಆಟಗಾರರಾದ ರೋಹಿತ್ ಶರ್ಮಾ, ಶಿಖರ್ ಧವನ್ ಉತ್ತಮ ಮೊತ್ತ ಕಲೆ ಹಾಕಿದರು. ಶಿಖರ್ ಧವನ್ ಹಾಗೂ ವಿರಾಟ್ ಕೊಹ್ಲಿ ಶತಕ ಸಿಡಿಸಿ ತಂಡವನ್ನು ಗೆಲುವಿನತ್ತ ತಂದರು. ಆದರೆ ಶಿಖರ್ ಧವನ್ ಔಟಾದ ನಂತರ ಒಬ್ಬರಿಂದೊಬ್ಬರಂತೆ ಟೀಂ ಇಂಡಿಯಾ ಆಟಗಾರರು ಔಟಾಗಿ ಪೆವಿಲಿಯನ್ ಸೇರಿದರು.
ಟೀ ಇಂಡಿಯಾ 323 ರನ್ ಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ಆಸ್ಟ್ರೇಲಿಯಾಗೆ ಶರಣಾದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

