ಸಿಗ್ನಲ್ ಲೈಟ್ ಕಂಬ ಬಿತ್ತು; ಕೂದಲೆಳೆ ಅಂತರದಲ್ಲಿ ಅಪಘಾತದಿಂದ ಪಾರಾದ ರೊನಾಲ್ಡಿನೋ
ಕೇರಳಕ್ಕೆ ಭೇಟಿ ನೀಡಿದ್ದ ಬ್ರೆಜಿಲ್ ನ ಖ್ಯಾತ ಫುಟ್ಬಾಲ್ ತಾರೆ ರೊನಾಲ್ಡಿನೋ ಅಪಘಾತವೊಂದರಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಕೋಝಿಕ್ಕೋಡ್ ಜಿಲ್ಲೆಯ...

Published On :
ಕೋಝಿಕ್ಕೋಡ್: ಕೇರಳಕ್ಕೆ ಭೇಟಿ ನೀಡಿದ್ದ ಬ್ರೆಜಿಲ್ ನ ಖ್ಯಾತ ಫುಟ್ಬಾಲ್ ತಾರೆ ರೊನಾಲ್ಡಿನೋ ಅಪಘಾತವೊಂದರಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.
ಕೋಝಿಕ್ಕೋಡ್ ಜಿಲ್ಲೆಯ ನಡಕ್ಕಾವ್ ಹೆಣ್ಣುಮಕ್ಕಳ ಸರ್ಕಾರಿ ಹೈಯರ್ಸೆಕೆಂಡರಿ ಶಾಲೆಯಲ್ಲಿನ ಕಾರ್ಯಕ್ರಮ ಮುಗಿಸಿ ಹೊರಡುತ್ತಿದ್ದಂತೆ ಅವರ ಕಾರಿನ ಮುಂದೆಯೇ ಸಿಗ್ನಲ್ ಲೈಟ್ ಕಂಬವೊಂದು ಬಿದ್ದಿದೆ.
ರೊನಾಲ್ಡಿನೋ ಅವರನ್ನು ನೋಡಲು ಸಾವಿರಾರು ಮಂದಿ ಅಲ್ಲಿ ಜಮಾಯಿಸಿದ್ದು, ಈ ವೇಳೆ ಸಿಗ್ನಲ್ ಲೈಟ್ ಕಂಬ ಬಿದ್ದಿದೆ. ಈ ಕಂಬ ಕಾರಿನ ಮುಂದೆ ಬಿದ್ದ ಕಾರಣ ಕೂದಲೆಳೆ ಅಂತರದಲ್ಲಿ ರೊನಾಲ್ಡಿನೋ ಪಾರಾಗಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಜನರ ನೂಕು ನುಗ್ಗಲಿನಿಂದಾಗಿ ಕೆಟ್ಟು ಹೋಗಿರುವ ಸಿಗ್ನಲ್ ಕಂಬ ಬಿದ್ದಿದೆ, ಇಲ್ಲಿ ಯಾವುದೇ ಭದ್ರತಾಲೋಪ ಸಂಭವಿಸಿಲ್ಲ ಎಂದು ಪೊಲೀಸರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


