ಆಸ್ಟ್ರೇಲಿಯನ್ ಓಪನ್: ಸೆಮೀಸ್ಗೆ ಸಾನಿಯಾ-ಮಾರ್ಟಿನಾ ಜೋಡಿ
ವಿಶ್ವದ ನಂಬರ್ 1 ಟೆನ್ನಿಸ್ ಜೋಡಿ ಭಾರತದ ಖ್ಯಾತ ಸಾನಿಯಾ ಮಿರ್ಜಾ ಮತ್ತು ಸ್ವಿಜರ್ಲೆಂಡ್ನ ಮಾರ್ಟಿನಾ ಹಿಂಗೀಸ್ ಜೋಡಿ ಆಸ್ಟ್ರೇಲಿಯನ್ ಓಪನ್ ಟೆನಿಸ್ ಟೂರ್ನಿಯ ಸೆಮಿಫೈನಲ್ ಪ್ರವೇಶಿಸಿದ್ದಾರೆ...

ಮೆಲ್ಬೋರ್ನ್: ವಿಶ್ವದ ನಂಬರ್ 1 ಟೆನ್ನಿಸ್ ಜೋಡಿ ಭಾರತದ ಖ್ಯಾತ ಸಾನಿಯಾ ಮಿರ್ಜಾ ಮತ್ತು ಸ್ವಿಜರ್ಲೆಂಡ್ನ ಮಾರ್ಟಿನಾ ಹಿಂಗೀಸ್ ಜೋಡಿ ಆಸ್ಟ್ರೇಲಿಯನ್ ಓಪನ್ ಟೆನಿಸ್ ಟೂರ್ನಿಯ ಸೆಮಿಫೈನಲ್ ಪ್ರವೇಶಿಸಿದ್ದಾರೆ.
ಮಂಗಳವಾರ ನಡೆದ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಜರ್ಮನಿಯ ಅನಾ ಲೆನಾ ಗ್ರೊನೆಫೆಲ್ಡ್ ಮತ್ತು ಅಮೆರಿಕದ ಕೊಕೊ ವ್ಯಾಂಡೆವೆಘೆ ಜೋಡಿ ವಿರುದ್ಧ ಭರ್ಜರಿ ಜಯ ಸಾಧಿಸಿದ ಈ ಜೋಡಿ ಅರ್ಹವಾಗಿಯೇ ಸೆಮಿಫೈನಲ್ ಗೆ ರಹದಾರಿ ಪಡೆದಿದೆ. ಸುಮಾರು ಒಂದು ಗಂಟೆ 47 ನಿಮಿಷಗಳ ಕಾಲ ನಡೆದ ಈ ಪಂದ್ಯದಲ್ಲಿ ಆರಂಭದಿಂದಲೂ ಮೇಲುಗೈ ಸಾಧಿಸಿದ ಈ ಜೋಡಿ ಅನಾ ಲೆನಾ ಗ್ರೊನೆಫೆಲ್ಡ್ ಮತ್ತು ಕೊಕೊ ವ್ಯಾಂಡೆವೆಘೆ ಜೋಡಿಯನ್ನು 6-4, 4-6, 6-1 ನೇರ ಸೆಟ್ ಗಳ ಅಂತರದಿಂದ ಸೋಲಿಸಿತು.
ಇಂದಿನ ಪಂದ್ಯದ ಗೆಲುವಿನ ಮೂಲಕ ವಿಶ್ವ ನಂಬರ್ ಡಬಲ್ಸ್ ಜೋಡಿ ಗೆಲುವಿನ ಸಂಖ್ಯೆಯನ್ನು 34ಕ್ಕೆ ಏರಿಕೆ ಮಾಡಿಕೊಂಡಿದೆ. 2011ರಲ್ಲಿ ಜೊತೆಯಾದ ಸಾನಿಯಾ ಮಿರ್ಜಾ ಹಾಗೂ ಮಾರ್ಟಿನಾ ಹಿಂಗಿಸ್ ಜೋಡಿ ತನ್ನ ಯಶಸ್ಸಿನಿಂದಲೇ ಇದೀಗ ನಂಬರ್ ಒನ್ ಸ್ಥಾನಕ್ಕೇರಿದ್ದು, ಒಟ್ಟು 11 ಮಹಿಳಾ ಡಬಲ್ಸ್ ಪ್ರಶಸ್ತಿಗಳನ್ನು ಮತ್ತು ವಿಂಬಲ್ಡನ್ ಮತ್ತು ಯುಎಸ್ ಒಪನ್ ನ ಎರಡು ಗ್ರ್ಯಾಂಡ್ ಸ್ಲ್ಯಾಮ್ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದ್ದಾರೆ.
ಆಸ್ಟ್ರೇಲಿಯಾ ಓಪನ್ ಸೆಮಿಫೈನಲ್ ಪಂದ್ಯದಲ್ಲಿ ಈ ಜೋಡಿ 13ನೇ ಶ್ರೇಯಾಂಕದ ಜೂಲಿಯಾ ಜಾರ್ಜಸ್ ಮತ್ತು ಕ್ಯಾರೊಲಿನಾ ಪ್ಲಿಸ್ಕೋವಾ ಅವರನ್ನು ಎದುರಿಸಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


