ಕ್ರಿಮಿನಲ್ ಕೇಸ್ ಗೆ ಸುಪ್ರೀಂ ತಡೆಯಾಜ್ಞೆ: ಮಹೇಂದ್ರ ಸಿಂಗ್ ಧೋನಿ ನಿರಾಳ
ಜಾಹೀರಾತು ಒಂದರಲ್ಲಿ ತನ್ನನ್ನು ಭಗವಾನ್ ವಿಷ್ಣುವಿನಂತೆ ತೋರಿಸಿಕೊಂಡು ಕೈಯ್ಯಲ್ಲಿ ಶೂ ಹಿಡಿದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಿಕೆಟಿಗ ಮಹೇಂದ್ರ ಸಿಂಗ್ ಧೋನಿ

ನವದೆಹಲಿ: ಜಾಹೀರಾತು ಒಂದರಲ್ಲಿ ತನ್ನನ್ನು ಭಗವಾನ್ ವಿಷ್ಣುವಿನಂತೆ ತೋರಿಸಿಕೊಂಡು ಕೈಯ್ಯಲ್ಲಿ ಶೂ ಹಿಡಿದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಿಕೆಟಿಗ ಮಹೇಂದ್ರ ಸಿಂಗ್ ದೋನಿ ವಿರುದ್ಧದ ಕ್ರಿಮಿನಲ್ ಖಟ್ಲೆಗೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದೆ.
ಪ್ರಕರಣವನ್ನು ಅನಂತಪುರದಿಂದ ಬೆಂಗಳೂರಿಗೆ ವರ್ಗಾಯಿಸುವಂತೆ ಕೋರಿ ಧೋನಿ ಅವರು ಸಲ್ಲಿಸಿರುವ ಮನವಿ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ಆಂಧ್ರಪ್ರದೇಶ ಪೊಲೀಸರಿಗೆ ಸುಪ್ರೀಂಕೋರ್ಟ್ ಸೂಚಿಸಿದೆ.
ನಿಯತಕಾಲಿಕವೊಂದರ ಜಾಹೀರಾತಿನಲ್ಲಿ ‘ಭಗವಾನ್ ವಿಷ್ಣುವಿನಂತೆ’ ತೋರಿಸಿಕೊಳ್ಳುವ ಮೂಲಕ ಧೋನಿ ಅವರು ಹಿಂದು ದೇವರಿಗೆ ಕಳಂಕ ತಂದಿದ್ದಾರೆ ಎಂದು ಆರೋಪಿಸಿ ಪ್ರಕರಣ ದಾಖಲಿಸಲಾಗಿತ್ತು. ಈ ಪ್ರಕರಣವನ್ನು ಅನಂತಪುರದಿಂದ ಬೆಂಗಳೂರಿಗೆ ವರ್ಗಾಯಿಸುವಂತೆಯೂ ಧೋನಿ ಕೋರಿದ್ದರು. ಅನಂತಪುರದ ನ್ಯಾಯಾಲಯವು ಪ್ರಕರಣಕ್ಕೆ ಸಂಬಂಧಿಸಿದಂತೆ ಧೋನಿ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ ಮಾಡಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


