ಭಾರತ-ಶ್ರೀಲಂಕಾ 2ನೇ ಟಿ20 ಪಂದ್ಯ ದೆಹಲಿಯಿಂದ ರಾಂಚಿಗೆ ಸ್ಥಳಾಂತರ
ಅವ್ಯವಹಾರ ವಿವಾದದಲ್ಲಿ ಸಿಲುಕಿರುವ ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್ ಸಂಸ್ಥೆ(ಡಿಡಿಸಿಎ) ದೆಹಲಿಯ ಫಿರೋಜ್ ಷಾ ಕೊಟ್ಲಾ ಮೈದಾನದಲ್ಲಿ ನಡೆಯಬೇಕಿದ್ದ ಶ್ರೀಲಂಕಾ...

ನವದೆಹಲಿ: ಅವ್ಯವಹಾರ ವಿವಾದದಲ್ಲಿ ಸಿಲುಕಿರುವ ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್ ಸಂಸ್ಥೆ(ಡಿಡಿಸಿಎ) ದೆಹಲಿಯ ಫಿರೋಜ್ ಷಾ ಕೊಟ್ಲಾ ಮೈದಾನದಲ್ಲಿ ನಡೆಯಬೇಕಿದ್ದ ಶ್ರೀಲಂಕಾ ವಿರುದ್ಧದ ಎರಡನೇ ಟಿ-20 ಪಂದ್ಯವನ್ನು ಆಯೋಜನೆ ಮಾಡುವುದಿಲ್ಲ ಎಂದು ಹೇಳಿರುವುದರಿಂದ ದೆಹಲಿಯಲ್ಲಿ ನಡೆಯಬೇಕಿದ್ದ ಪಂದ್ಯವನ್ನು ರಾಂಚಿಗೆ ಸ್ಥಳಾಂತರಿಸಲಾಗಿದೆ.
ಶ್ರೀಲಂಕಾ ವಿರುದ್ಧ ಮೂರು ಟಿ20 ಅಂತಾರಾಷ್ಟ್ರೀಯ ಪಂದ್ಯಗಳ ವೇಳಾಪಟ್ಟಿ ಬಿಡುಗಡೆಯಾಗಿತ್ತು. ಈ ನಡುವೆ ದೆಹಲಿಯಲ್ಲಿ ನಡೆಯಬೇಕಿದ್ದ ಪಂದ್ಯವನ್ನು ಡಿಡಿಸಿಎ ಆಯೋಜನೆ ಮಾಡಲು ದೆಹಲಿ ನಿರಾಕರಿಸಿರುವುದರಿಂದ ಫೆಬ್ರವರಿ 12ಕ್ಕೆ ನಿಗದಿಯಾಗಿದ್ದ ಪಂದ್ಯವನ್ನು ರಾಂಚಿಗೆ ಸ್ಥಳಾಂತರಿಸಲಾಗಿದೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಕಾರ್ಯದರ್ಶಿ ಅನುರಾಗ್ ಠಾಕೂರ್ ಹೇಳಿದ್ದಾರೆ.
ಮತ್ತೆರಡು ಪಂದ್ಯಗಳು ವೇಳಾಪಟ್ಟಿಯಲ್ಲಿರುವಂತೆ ಫೆಬ್ರವರಿ 9 ರಂದು ಪುಣೆ ಹಾಗೂ ಮೂರನೇ ಪಂದ್ಯ ಫೆಬ್ರವರಿ 14 ವಿಶಾಖಪಟ್ಟಂನಲ್ಲಿ ನಡೆಯಲಿದೆ ಎಂದು ಬಿಸಿಸಿಐ ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


