ಕ್ರೀಡೆ

ಕೊಹ್ಲಿ ಕತ್ತಲಲ್ಲೂ ಆಡಬಲ್ಲ ಚಲಗಾರ: ಗವಾಸ್ಕರ್

ತಮ್ಮ ಸ್ಪೋಟಕ ಬ್ಯಾಟಿಂಗ್ ನಿಂದಾಗಿ ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿ ಜಯಕ್ಕೆ ಕಾರಣರಾದ ವಿರಾಟ್ ಕೊಹ್ಲಿ ಬೆಳಕಿಲ್ಲದೆ ಕತ್ತಲಲ್ಲಿ ಬ್ಯಾಟಿಂಗ್ ಮಾಡಬಲ್ಲ ಚಲಗಾರ...

ಕೊಹ್ಲಿ ಕತ್ತಲಲ್ಲೂ ಆಡಬಲ್ಲ ಚಲಗಾರ: ಗವಾಸ್ಕರ್
ಸುನೀಲ್ ಗವಾಸ್ಕರ್
Published On :

ಮೆಲ್ಬೋರ್ನ್: ತಮ್ಮ ಸ್ಪೋಟಕ ಬ್ಯಾಟಿಂಗ್ ನಿಂದಾಗಿ ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿ ಜಯಕ್ಕೆ ಕಾರಣರಾದ ವಿರಾಟ್ ಕೊಹ್ಲಿ ಬೆಳಕಿಲ್ಲದೆ ಕತ್ತಲಲ್ಲಿ ಬ್ಯಾಟಿಂಗ್ ಮಾಡಬಲ್ಲ ಚಲಗಾರ ಎಂದು ಮಾಜಿ ಟೀಂ ಇಂಡಿಯಾ ಆಟಗಾರ ಸುನೀಲ್ ಗವಾಸ್ಕರ್ ಹೇಳಿದ್ದಾರೆ.

ಶುಕ್ರವಾರ ನಡೆದ ಟಿ20 ಪಂದ್ಯದಲ್ಲಿ ವಿರಾಟ್ ಕೊಹ್ಲಿ ಆಸ್ಟ್ರೇಲಿಯಾ ವಿರುದ್ಧ ಅಬ್ಬರಿಸಿದ್ದರು. ವೇಗವಾಗಿ ಅರ್ಧ ಶತಕ ಬಾರಿಸಿದ್ದು ತಂಡದ ಗೆಲುವಿಗೆ ಕಾರಣವಾಗಿತ್ತು. ಅದ್ಭುತ ಫಾರ್ಮ್ ನಲ್ಲಿರುವ ಕೊಹ್ಲಿ ತಂಡದ ಇನ್ನಿತರ ಆಟಗಾರರ ಸ್ಫೂರ್ತಿದಾಯಕರಾಗಿದ್ದಾರೆ. ಅಂತ ಪ್ರತಿಭಾವಂತ ಆಟಗಾರ ಕೊಹ್ಲಿ ಕತ್ತಲಲ್ಲು ಆಡಬಲ್ಲ ಚಲಗಾರ ಎಂದು ವರ್ಣಿಸಿದ್ದಾರೆ.

ಸ್ಫೋಟಕ ಆಟಗಾರರಾದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಇಬ್ಬರಲ್ಲಿ ಯಾರಿಗೆ ಬೌಲಿಂಗ್ ಮಾಡುವ ಇಚ್ಛೆ ಹೊಂದಿದ್ದೀರ ಎಂದು ಕೇಳಿದರೆ. ಇಬ್ಬರಿಗೂ ಬೌಲಿಂಗ್ ಮಾಡುವುದಿಲ್ಲ. ರೋಹಿತ್ ಶರ್ಮಾ ಟಿಕಲ್ ಮಾಡುವ ಮೂಲಕ ಕೊಂದರೆ ವಿರಾಟ್ ಕೊಹ್ಲಿ ಪಂಚ್ ಮೂಲಕ ಸಾಯಿಸುತ್ತಾರೆ. ಈಗಿರುವಾಗ ಯಾಕಾಗಿ ಸಾಯಲು ಹೋಗಬೇಕು ಎಂದು ಹಾಸ್ಯ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.