ಏಷ್ಯಾಕಪ್ ಟಿ20: ಪಾಕಿಸ್ತಾನ ವಿರುದ್ಧ ಬಾಂಗ್ಲಾದೇಶಕ್ಕೆ 5 ವಿಕೆಟ್ ಗಳ ಭರ್ಜರಿ ಜಯ
ಏಷ್ಯಾಕಪ್ ಟಿ20 ಟೂರ್ನಿ ನಿಮಿತ್ತ ಬುಧವಾರ ನಡೆದ ಪಾಕಿಸ್ತಾನದ ವಿರುದ್ಧದ ಪಂದ್ಯದಲ್ಲಿ ಅತಿಥೇಯ ಬಾಂಗ್ಲಾದೇಶ 5 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ.

Published On :
ಮೀರ್ ಪುರ: ಏಷ್ಯಾಕಪ್ ಟಿ20 ಟೂರ್ನಿ ನಿಮಿತ್ತ ಬುಧವಾರ ನಡೆದ ಪಾಕಿಸ್ತಾನದ ವಿರುದ್ಧದ ಪಂದ್ಯದಲ್ಲಿ ಅತಿಥೇಯ ಬಾಂಗ್ಲಾದೇಶ 5 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ.
ಕಳೆದ ಪಂದ್ಯದಲ್ಲಿ ವಿಶ್ವ ಚಾಂಪಿಯನ್ ಶ್ರೀಲಂಕಾಕ್ಕೆ ಆಘಾತ ನೀಡಿದ್ದ ಬಾಂಗ್ಲಾದೇಶ ತಂಡ, ಬುಧವಾರ 2009ರ ವಿಶ್ವಚಾಂಪಿಯನ್ ಪಾಕಿಸ್ತಾನ ತಂಡಕ್ಕೆ ಆಘಾತಕಾರಿ ಸೋಲು ನೀಡುವ ಮೂಲಕ ಏಷ್ಯಾಕಪ್ ಟಿ20 ಟೂರ್ನಿಯ ಫೈನಲ್ಗೇರಿದೆ.
ಶೇರ್ ಎ ಬಾಂಗ್ಲಾ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ತಂಡ ಸರ್ಫ್ರಾಜ್ ಅಹ್ಮದ್ (58 ರನ್, 42 ಎಸೆತ, 5 ಬೌಂಡರಿ, 2 ಸಿಕ್ಸರ್) ಅವರ ಸಮಯೋಚಿತ ಆಟದಿಂದ ನಿಗದಿತ 20 ಓವರ್ ಗಳಲ್ಲಿ 7 ವಿಕೆಟ್ಗೆ 129 ರನ್ ಪೇರಿಸಿತ್ತು.ಈ ಸಾಧಾರಣ ಮೊತ್ತವನ್ನು ಬೆನ್ನು ಹತ್ತಿದ ಬಾಂಗ್ಲಾ 19.1 ಓವರ್ಗಳಲ್ಲಿ 5 ವಿಕೆಟ್ ನಷ್ಟಕ್ಕೆ 131 ರನ್ ಬಾರಿಸಿ 5 ವಿಕೆಟ್ಗಳಿಂದ ಗೆಲುವು ಸಾಧಿಸಿತು.
ಅಲ್ಪ ಮೊತ್ತ ಬೆನ್ನಟ್ಟಿದ ಬಾಂಗ್ಲಾ ತಂಡ ಸೌಮ್ಯ ಸರ್ಕಾರ್ 48 ರನ್ ಮತ್ತು ಮಹಮದುಲ ಅವರ ಅಜೇಯ 22 ರನ್ ನೆರವಿನಿಂದ ಇನ್ನೂ 5 ಎಸೆತ ಬಾಕಿ ಇರುವಂತೆಯೇ ಗೆಲುವಿನ ದಡ ಸೇರಿತು.ಆ ಮೂಲಕ ಏಷ್ಯಾಕಪ್ ಸರಣಿಯ ಫೈನಲ್ ಗೆ ಬಾಂಗ್ಲಾದೇಶ ಅಡಿ ಇಟ್ಟಿದ್ದು, ಫೈನಲ್ ನಲ್ಲಿ ಭಾರತವನ್ನು ಎದುರಿಸಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


