ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಕುಸ್ತಿಪಟು ಯೋಗೇಶ್ವರ್ ದತ್
ಭಾರತದ ಪ್ರಮುಖ ಕುಸ್ತಿಪಟು ಯೋಗೇಶ್ವರ್ ದತ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದುಕೊಂಡಿದ್ದಾರೆ. ಶನಿವಾರ ಏಷ್ಯನ್ ಒಲಿಂಪಿಕ್ ಅರ್ಹತಾ ಪಂದ್ಯದಲ್ಲಿ ಗೆಲ್ಲುವ ಮೂಲಕ...

Published On :
ಆಸ್ತಾನ: ಭಾರತದ ಪ್ರಮುಖ ಕುಸ್ತಿಪಟು ಯೋಗೇಶ್ವರ್ ದತ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದುಕೊಂಡಿದ್ದಾರೆ. ಶನಿವಾರ ಏಷ್ಯನ್ ಒಲಿಂಪಿಕ್ ಅರ್ಹತಾ ಪಂದ್ಯದಲ್ಲಿ ಗೆಲ್ಲುವ ಮೂಲಕ ಲಂಡನ್ ಒಲಿಂಪಿಕ್ಸ್ ನಲ್ಲಿ ಕಂಚಿನ ಪದಕ ಗೆದ್ದಿದ್ದ ಯೋಗೇಶ್ವರ್ ರಿಯೋ ಡಿ ಜನೆರೋದಲ್ಲಿ ನಡೆಯಲಿರುವ ಒಲಿಂಪಿಕ್ಸ್ ಪಂದ್ಯಕ್ಕೆ ಪ್ರವೇಶ ಗಿಟ್ಟಿಸಿಕೊಂಡಿದ್ದಾರೆ .
65 ಕೆಜಿ ವಿಭಾಗದ ಸೆಮಿ ಫೈನಲ್‌ನಲ್ಲಿ ದಕ್ಷಿಣ ಕೊರಿಯಾದ ಸ್ಯೇಂಗ್‌ಚುಲ್ ಲೀ ಅವರನ್ನು 7-2 ಅಂತರದಲ್ಲಿ ಯೋಗೇಶ್ವರ್ ಪರಾಭವಗೊಳಿಸಿದ್ದರು. ಅರ್ಹತಾ ಪಂದ್ಯದ ಮೊದಲ ಸುತ್ತಿನಲ್ಲಿ ಉತ್ತರ ಕೊರಿಯಾದ ಜು ಸೋಂಗ್ ಕಿಂಮ್ ಅವರನ್ನು 8-1 ಅಂತರದಿಂದ , ಕ್ವಾರ್ಟರ್ ಫೈನಲ್‌ನಲ್ಲಿ ವಿಯೇಟ್ನಾಂನ ಕ್ಸಾನ್ ದಿನ್ಸ್ ಗುಯೇನ್ ರಂನ್ನು 12-2 ಅಂತರದಲ್ಲಿ ಯೋಗೇಶ್ವರ್ ಮಣಿಸಿದ್ದರು.
ರಿಯೋ ಒಲಿಂಪಿಕ್ಸ್‌ನಲ್ಲಿ ಅರ್ಹತೆ ಪಡೆಯುತ್ತಿರುವ ಎರಡನೇ ಕುಸ್ತಿಪಟುವಾಗಿದ್ದಾರೆ ಯೋಗೇಶ್ವರ್. ಈ ಹಿಂದೆ 74 ಕೆಜಿ ಫ್ರೀ ಸ್ಟೈಲ್‌ನಲ್ಲಿ ನರಸಿಂಗ್ ಪಂಚಮ್ ಯಾದವ್ ಅರ್ಹತೆ ಪಡೆದಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


