ಕ್ರೀಡೆ

ಡೆಲ್ಲಿ ವಿರುದ್ಧ ಧೋನಿ ಪಡೆಗೆ ಮಾಡು ಇಲ್ಲವೆ ಮಡಿ ಪಂದ್ಯ

ಐಪಿಎಲ್ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಯಶಸ್ವಿಯಾಗಿ ಮುನ್ನಡೆಸಿ ಎರಡು ಬಾರಿ ಚಾಂಪಿಯನ್ ಪಟ್ಟ ಅಲಂಕರಿಸುವಂತೆ ಮಾಡಿದ್ದ ಎಂಎಸ್ ಧೋನಿ...

ಡೆಲ್ಲಿ ವಿರುದ್ಧ ಧೋನಿ ಪಡೆಗೆ ಮಾಡು ಇಲ್ಲವೆ ಮಡಿ ಪಂದ್ಯ
ಎಂಎಸ್ ಧೋನಿ
Published On :

ನವದೆಹಲಿ: ಐಪಿಎಲ್ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಯಶಸ್ವಿಯಾಗಿ ಮುನ್ನಡೆಸಿ ಎರಡು ಬಾರಿ ಚಾಂಪಿಯನ್ ಪಟ್ಟ ಅಲಂಕರಿಸುವಂತೆ ಮಾಡಿದ್ದ ಎಂಎಸ್ ಧೋನಿ ಇದೀಗ ಪುಣೆ ತಂಡದ ನಾಯಕನಾಗಿದ್ದು ತಂಡ ಸತತ ಸೋಲುಗಳಿಂದ ಕಂಗೆಟ್ಟಿದ್ದು, ಟೂರ್ನಿಯಿಂದ ಹೊರಬೀಳುವ ಸಾಧ್ಯತೆಗಳು ದಟ್ಟವಾಗಿವೆ.

ಇಂದು ಡೆಲ್ಲಿ ಡೇರ್ ಡೇವಿಲ್ಸ್ ತಂಡವನ್ನು ರೈಸಿಂಗ್ ಪುಣೆ ಸೂಪರ್ ಜೈಂಟ್ಸ್ ತಂಡ ಎದುರಿಸಲಿದ್ದು, ಪುಣೆಗೆ ಇದು ಮಾಡು ಇಲ್ಲವೆ ಮಡಿ ಪಂದ್ಯವಾಗಿದೆ. ಸತತ ಗೆಲುವಿನ ಹುಮ್ಮಸ್ಸಿನಲ್ಲಿರುವ ಜಹೀರ್ ಖಾನ್ ನಾಯಕತ್ವದ ಡೆಲ್ಲಿ ತಂಡ ಪುಣೆ ವಿರುದ್ಧ ಗೆದ್ದರೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಲಿದೆ.

ಐಪಿಎಲ್ ನಲ್ಲಿ ಪುಣೆ ಇದುವರೆಗೂ ಆಡಿರುವ 8 ಪಂದ್ಯಗಳ ಪೈಕಿ ಕೇವಲ 2 ಪಂದ್ಯಗಳಲ್ಲಷ್ಟೇ ಗೆದ್ದಿದ್ದು, ಲೀಗ್ ಹಂತದಲ್ಲಿ ಉಳಿದಿರುವ ಆರು ಪಂದ್ಯಗಳಲ್ಲಿ ಗೆದ್ದರಷ್ಟೇ ಫ್ಲೇ-ಆಫ್ ಆಸೆ ಜೀವಂತವಾಗಿರಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.