ಉದ್ದೀಪನ ಸೇವನೆ ಪ್ರಕರಣ: ಶರಪೋವಾಗೆ 4 ವರ್ಷ ನಿಷೇಧ?
ಉದ್ದೀಪನ ಮದ್ದು ಸೇವನೆ ಪ್ರಕರಣದಲ್ಲಿ ಸಿಲುಕಿರುವ ರಷ್ಯಾ ಟೆನಿಸ್ ಆಟಗಾರ್ತಿ ಮರಿಯಾ ಶರಪೋವಾ 4 ವರ್ಷ ನಿಷೇಧಕ್ಕೊಳಗಾಗುವ ಸಾಧ್ಯತೆ ಇದೆ...

ಲಂಡನ್: ಉದ್ದೀಪನ ಮದ್ದು ಸೇವನೆ ಪ್ರಕರಣದಲ್ಲಿ ಸಿಲುಕಿರುವ ರಷ್ಯಾ ಟೆನಿಸ್ ಆಟಗಾರ್ತಿ ಮರಿಯಾ ಶರಪೋವಾ 4 ವರ್ಷ ನಿಷೇಧಕ್ಕೊಳಗಾಗುವ ಸಾಧ್ಯತೆ ಇದೆ.
ಕಳೆದ ಆಸ್ಟ್ರೇಲಿಯಾ ಓಪನ್ ನಲ್ಲಿ ಮರಿಯಾ ಶರಪೋವಾ ಅವರು ನಿಷೇಧಿತ ಉದ್ದೀಪನ ಮೆಲ್ಡೋನಿಯಂ ಸೇವಿಸಿದ್ದು ಪತ್ತೆಯಾಗಿತ್ತು. ಈ ಹಿನ್ನೆಲೆ ಕಳೆದ ಮಾರ್ಚ್ 12 ರಂದು ತಾತ್ಕಾಲಿಕ ನಿಷೇಧಕ್ಕೊಳಗಾಗಿರುವ ಅವರು ವಿಚಾರಣೆ ಎದುರಿಸಲಿದ್ದಾರೆ.
ಅಂತಾರಾಷ್ಟ್ರೀಯ ಟೆನಿಸ್ ಒಕ್ಕೂಟ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವುದರಿಂದ ಮರಿಯಾ 4 ವರ್ಷ ನಿಷೇಧಕ್ಕೊಳಗಾಗುವ ಸಾಧ್ಯತೆ ಇದ್ದು ಅವರ ವೃತ್ತಿಜೀವನವೇ ಅಂತ್ಯಗೊಳ್ಳುವ ಸಾಧ್ಯತೆ ಇದೆ.
ಒಂದು ವೇಳೆ ಶಿಕ್ಷೆ ಪ್ರಮಾಣ ತಗ್ಗಿಸಿ 6 ರಿಂದ 12 ತಿಂಗಳು ನಿಷೇಧ ಹೇರುವ ಸಾಧ್ಯತೆ ಇದ್ದು ಹೀಗಾದರೆ ಮರಿಯಾ ಶರಪೋವಾರನ್ನು ಮತ್ತೆ ಅಂಕಣದಲ್ಲಿ ನೋಡಬಹುದು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


