ಈ ಬಾರಿ ರಿಯೋ ಪದಕ ಗೆದ್ದವರಿಗೆ ಖೇಲ್ ರತ್ನ, ಅರ್ಜುನ ಪ್ರಶಸ್ತಿ
ಮುಂಬರುವ ರಿಯೋ ಒಲಿಂಪಿಕ್ಸ್‌ನಲ್ಲಿ ವೈಯಕ್ತಿಕ ವಿಭಾಗದಲ್ಲಿ ಪದಕ ಗೆದ್ದವರನ್ನು ಪ್ರಸಕ್ತ ವರ್ಷದ ಖೇಲ್ ರತ್ನ ಮತ್ತು ಅರ್ಜುನ ಪ್ರಶಸ್ತಿಗಾಗಿ...

Published On :
ನವದೆಹಲಿ: ಮುಂಬರುವ ರಿಯೋ ಒಲಿಂಪಿಕ್ಸ್‌ನಲ್ಲಿ ವೈಯಕ್ತಿಕ ವಿಭಾಗದಲ್ಲಿ ಪದಕ ಗೆದ್ದವರನ್ನು ಪ್ರಸಕ್ತ ವರ್ಷದ ಖೇಲ್ ರತ್ನ ಮತ್ತು ಅರ್ಜುನ ಪ್ರಶಸ್ತಿಗಾಗಿ ಪರಿಗಣಿಸಲಾಗುವುದು ಎಂದು ಕ್ರೀಡಾ ಸಚಿವಾಲಯ ಮಂಗಳವಾರ ಹೇಳಿದೆ.
ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಪದಕ ಗಳಿಸಿಯೂ ಪ್ರಶಸ್ತಿ ಪಡೆಯಲು ಇನ್ನೊಂದು ವರ್ಷ ಕಾಯುವುದನ್ನು ತಪ್ಪಿಸುವುದಕ್ಕಾಗಿ ಈ ವರ್ಷವೇ ಒಲಿಂಪಿಕ್ಸ್ ಪದಕ ಗೆದ್ದವರನ್ನು ಪ್ರಶಸ್ತಿಗೆ ಪರಿಗಣಿಸಲು ತೀರ್ಮಾನಿಸಲಾಗಿದೆ ಎಂದು ಸಚಿವಾಲಯ ಹೇಳಿದೆ.
ಈ ಕ್ರೀಡಾಕೂಟದಲ್ಲಿ ವೈಯಕ್ತಿಕ ಸ್ಪರ್ಧೆಗಳಲ್ಲಿ ಪದಕ ಗೆದ್ದವರು ಈಗಾಗಲೇ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಗೆ ಪರಿಗಣನೆಯಾಗದೇ ಇದ್ದರೆ ಅವರನ್ನು ಪ್ರಸ್ತುತ ಪ್ರಶಸ್ತಿಗೆ ಪರಿಗಣಿಸಲಾಗುವುದು.
ತಂಡಗಳಲ್ಲಿ ಪದಕ ಗೆದ್ದವರು ಈಗಾಗಲೇ ಅರ್ಜುನ ಪ್ರಶಸ್ತಿಗೆ ಪಾತ್ರರಾಗದೇ ಇದ್ದರೆ ಅಂಥವರಿಗೆ ಅರ್ಜುನ ಪ್ರಶಸ್ತಿ ನೀಡಲಾಗುವುದು ಎಂದು ಸಚಿವಾಲಯ ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


