ಡಬ್ಲ್ಯುಬಿಒ ಏಷ್ಯಾ ಪೆಸಿಫಿಕ್ ಬೆಲ್ಟ್ ಉಳಿಸಿಕೊಳ್ಳಲು ಡಿ.17ಕ್ಕೆ ವಿಜೇಂದರ್ ಫೈಟ್
ಭಾರತದ ಸ್ಟಾರ್ ಬಾಕ್ಸರ್ ವಿಜೇಂದರ್ ಸಿಂಗ್ ಡಿಸೆಂಬರ್ 17ರಂದು ನಡೆಯಲಿರುವ ಪಂದ್ಯದಲ್ಲಿ ಡಬ್ಲ್ಯುಬಿಒ ಏಷ್ಯಾ ಪೆಸಿಫಿಕ್ ಸೂಪರ್ ಮಿಡ್ಲ್ ವೇಟ್ ಬೆಲ್ಟ್...

Published On :
ನವದೆಹಲಿ: ಭಾರತದ ಸ್ಟಾರ್ ಬಾಕ್ಸರ್ ವಿಜೇಂದರ್ ಸಿಂಗ್ ಡಿಸೆಂಬರ್ 17ರಂದು ನಡೆಯಲಿರುವ ಪಂದ್ಯದಲ್ಲಿ ಡಬ್ಲ್ಯುಬಿಒ ಏಷ್ಯಾ ಪೆಸಿಫಿಕ್ ಸೂಪರ್ ಮಿಡ್ಲ್ ವೇಟ್ ಬೆಲ್ಟ್ ಉಳಿಸಿಕೊಳ್ಳಲು ಫೈಟ್ ಮಾಡಲಿದ್ದಾರೆ.
ನವದೆಹಲಿಯ ತ್ಯಾಗರಾಜ ಸ್ಟೇಡಿಯಂನಲ್ಲಿ ಪಂದ್ಯ ನಡೆಯಲಿದ್ದು, ಎದುರಾಳಿ ಯಾರೆಂಬುದು ಮುಂದಿನ ದಿನಗಳಲ್ಲಿ ನಿರ್ಧರಿಸಲಾಗುತ್ತದೆ. ಇನ್ನು ಕಳೆದ ಜುಲೈನಲ್ಲಿ ಗೆದ್ದಿರುವ ಡಬ್ಲ್ಯುಬಿಒ ಏಷ್ಯಾ ಪೆಸಿಫಿಕ್ ಸೂಪರ್ ಮಿಡ್ಲ್ ವೇಟ್ ಬೆಲ್ಟ್ ಉಳಿಸಿಕೊಳ್ಳಲು ಫೈಟ್ ಮಾಡಲಿದ್ದಾರೆ ಎಂದು ವಿಜೇಂದರ್ ರ ಭಾರತದ ಪ್ರಮೋಟರ್ಸ್ ಆಗಿರುವ ಇನ್ಫಿನಿಟಿ ಆಪ್ಟಿಮಲ್ ಸಲ್ಯೂಷನ್ಸ್ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.
ವಿಜೇಂದರ್ ಸಿಂಗ್ ಈವರೆಗೂ 7 ಪಂದ್ಯಗಳಲ್ಲಿ ಗೆದ್ದಿದ್ದು ಇದರಲ್ಲಿ 6 ನಾಕೌಟ್ ಪಂದ್ಯಗಳಾಗಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


