ಅಂತಾರಾಷ್ಟ್ರೀಯ ಹಾಕಿ ಫೆಡರೇಷನ್‌ಗೆ ಭಾರತದ ನರಿಂದರ್ ಬಾತ್ರಾ ನೂತನ ಅಧ್ಯಕ್ಷ
ಅಂತಾರಾಷ್ಟ್ರೀಯ ಹಾಕಿ ಫೆಡರೇಷನ್(ಎಫ್ಐಎಚ್)ನ ನೂತನ ಅಧ್ಯಕ್ಷರಾಗಿ ಹಾಕಿ ಇಂಡಿಯಾದ ಅಧ್ಯಕ್ಷ ನರಿಂದರ್ ಬಾತ್ರಾ ಆಯ್ಕೆಯಾಗಿದ್ದಾರೆ...

Published On :
ದುಬೈ: ಅಂತಾರಾಷ್ಟ್ರೀಯ ಹಾಕಿ ಫೆಡರೇಷನ್(ಎಫ್ಐಎಚ್)ನ ನೂತನ ಅಧ್ಯಕ್ಷರಾಗಿ ಹಾಕಿ ಇಂಡಿಯಾದ ಅಧ್ಯಕ್ಷ ನರಿಂದರ್ ಬಾತ್ರಾ ಆಯ್ಕೆಯಾಗಿದ್ದಾರೆ.
ಎಫ್ಐಎಚ್ ನ ಸಭೆಯಲ್ಲಿ ನರಿಂದರ್ ಬಾತ್ರಾ ನೂತನ ಅಧ್ಯಕ್ಷರೆಂದು ಘೋಷಿಸಲಾಯಿತು. ಬಾತ್ರಾ 92 ವರ್ಷಗಳ ಇತಿಹಾಸ ಹೊಂದಿರುವ ಎಫ್ಐಎಚ್ ಗೆ ಆಯ್ಕೆಯಾದ ಮೊದಲ ಯುರೋಪಿಯನ್ನೇತರ ಅಧ್ಯಕ್ಷ ಎಂಬ ಹಿರಿಮೆಗೆ ಪಾತ್ರರಾಗಿದ್ದಾರೆ. ಇನ್ನು ಮುಂದಿನ ನಾಲ್ಕು ವರ್ಷಗಳ ಕಾಲ ಬಾತ್ರಾ ಹುದ್ದೆ ಮುಂದುವರೆಸಲಿದ್ದಾರೆ.
ಅಧ್ಯಕ್ಷರ ಆಯ್ಕೆಗಾಗಿ ನಡೆದ ಚುನಾವಣೆಯಲ್ಲಿ ಬಾತ್ರಾ ಅವರು ಐರ್ಲೆಂಡ್ ಡೇವಿಡ್ ಬಲ್ ಬಿರ್ನಿ ಮತ್ತು ಆಸ್ಟ್ರೇಲಿಯಾದ ಕೆನ್ ಲೀಡ್ ಅವರನ್ನು ಭಾರೀ ಮತಗಳ ಅಂತರದಿಂದ ಸೋಲಿಸಿದ್ದರು. ಬಾತ್ರಾಗೆ 68 ಮತ ಸಿಕ್ಕರೆ ಡೇವಿಡ್ ಗೆ 29, ಮತ್ತು ರೀಡ್ ಗೆ ಕೇವಲ 13 ಮತ್ತು ಸಿಕ್ಕಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


