ಅನನುಭವಿ ದಕ್ಷಿಣ ಕೊರಿಯಾ ವಿರುದ್ಧ ಸೋತ ಭಾರತ
ಕಬಡ್ಡಿ ವಿಶ್ವಕಪ್ ಟೂರ್ನಿಯ 3ನೇ ಆವೃತ್ತಿಯಯಲ್ಲಿ ಎರಡು ಬಾರಿಯ ಚಾಂಪಿಯನ್ ಪಟ್ಟ ಅಲಂಕರಿಸಿದ್ದ ಭಾರತ ತಂಡವನ್ನು ಅನನುಭವಿ ದಕ್ಷಿಣ ಕೊರಿಯಾ...

ಅಹಮದಾಬಾದ್: ಕಬಡ್ಡಿ ವಿಶ್ವಕಪ್ ಟೂರ್ನಿಯ 3ನೇ ಆವೃತ್ತಿಯಯಲ್ಲಿ ಎರಡು ಬಾರಿಯ ಚಾಂಪಿಯನ್ ಪಟ್ಟ ಅಲಂಕರಿಸಿದ್ದ ಭಾರತ ತಂಡವನ್ನು ಅನನುಭವಿ ದಕ್ಷಿಣ ಕೊರಿಯಾ ಸೋಲಿಸಿದೆ.
ಅಹಮದಾಬಾದ್ ನ ಟ್ರಾನ್ಸ್ ಸ್ಟೇಡಿಯಂನಲ್ಲಿ ನಡೆದ ಉದ್ಘಾಟನಾ ಪಂದ್ಯದಲ್ಲಿ ಅನೂಪ್ ಕುಮಾರ್ ಸಾರಥ್ಯದ ಭಾರತ ಮೊದಲಾರ್ಧ ಅವಧಿಯಲ್ಲಿ ಮೇಲುಗೈ ಕಂಡಿದ್ದರೂ ಕೊನೇ ಕ್ಷಣದಲ್ಲಿ ಮಾಡಿದ ಎಡವಟ್ಟಿನಿಂದ 32-34 ಅಂಕಗಳಿಂದ ಕೊರಿಯಾಗೆ ಶರಣಾಗಿದೆ.
ಟೂರ್ನಿಗೆ ಗುಜರಾತ್ ಸಿಎಂ ಚಾಲನೆ
ಭಾರತ ಮತ್ತು ದಕ್ಷಿಣ ಕೊರಿಯಾ ತಂಡಗಳ ನಡುವಿನ ಉದ್ಘಾಟನಾ ಪಂದ್ಯವನ್ನು ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ವಿಶ್ವಕಪ್ ಗೆ ಚಾಲನೆ ನೀಡಿದರು. ಈ ವೇಳೆ ಅಂತಾರಾಷ್ಟ್ರೀಯ ಕಬಡ್ಡಿ ಒಕ್ಕೂಟದ ಅಧ್ಯಕ್ಷ ಜನಾರ್ಧನ್ ಸಿಂಗ್ ಗೆಹ್ಲೋಟ್, ಬಾಲಿವುಡ್ ನಟ ಅಭಿಷೇಕ್ ಬಚ್ಚನ್, ಸುನೀಲ್ ಶೆಟ್ಟಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


