ಸ್ವಚ್ಛ ಭಾರತ ಅಭಿಯಾನದಲ್ಲಿ ಪಾಲ್ಗೊಂಡ ವಿರಾಟ್ ಕೊಹ್ಲಿಗೆ ಪ್ರಧಾನಿಯಿಂದ ಅಭಿನಂದನೆ
ಸ್ವಚ್ಛ ಭಾರತ ಅಭಿಯಾನವನ್ನು ಯಶಸ್ವಿಗೊಳಿಸಲು ಸಹಕರಿಸಿದ್ದಕ್ಕಾಗಿ ಭಾರತೀಯ ಟೆಸ್ಟ್...

Published On :
ನವದೆಹಲಿ: ಸ್ವಚ್ಛ ಭಾರತ ಅಭಿಯಾನವನ್ನು ಯಶಸ್ವಿಗೊಳಿಸಲು ಸಹಕರಿಸಿದ್ದಕ್ಕಾಗಿ ಭಾರತೀಯ ಟೆಸ್ಟ್ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಭಿನಂದನೆ ಹೇಳಿದ್ದಾರೆ.
ಟ್ವಿಟ್ಟರ್ ನಲ್ಲಿ ಅವರು, ವಿರಾಟ್ ಕೊಹ್ಲಿಯವರು ಸ್ವಚ್ಛ ಭಾರತ ಅಭಿಯಾನದಲ್ಲಿ ಭಾಗವಹಿಸಿದ್ದನ್ನು ನೋಡಿದ್ದೇನೆ. ಇದು ಸಣ್ಣದಾದರೂ ಕೂಡ ಪ್ರಬಲವಾದ ಸೂಚನೆಯಾಗಿದ್ದು ಪ್ರತಿಯೊಬ್ಬರಲ್ಲೂ ಸ್ಪೂರ್ತಿ ತುಂಬಬಲ್ಲದು ಎಂದು ಹೇಳಿದ್ದಾರೆ.
ಭಾರತ-ನ್ಯೂಜಿಲ್ಯಾಂಡ್ ಟೆಸ್ಟ್ ಪಂದ್ಯ ಸಂದರ್ಭದಲ್ಲಿ ಕೋಲ್ಕತ್ತಾದ ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ಬಿಸಿಸಿಐ ಅಧ್ಯಕ್ಷ ಅನುರಾಗ್ ಠಾಕೂರ್ ಅವರೊಂದಿಗೆ ಕೊಹ್ಲಿ ಮತ್ತು ಭಾರತೀಯ ತಂಡ ಸ್ವಚ್ಛ ಭಾರತ ಅಭಿಯಾನದಲ್ಲಿ ಭಾಗವಹಿಸಿತ್ತು.
ಪ್ರಧಾನಿ ಟ್ವೀಟ್ ಗೆ ಪ್ರತಿಕ್ರಿಯೆ ನೀಡಿರುವ ಕೊಹ್ಲಿ, ನಾವೆಲ್ಲರೂ ದೇಶದ ಸುಧಾರಣೆಯಲ್ಲಿ ಬದಲಾವಣೆ ತರಲು ಪ್ರಯತ್ನಿಸುತ್ತಿದ್ದೇವೆ. ಅದಕ್ಕೆ ನಿಮ್ಮ ಪ್ರೇರಣೆಯೇ ಕಾರಣ ಎಂದು ಹೇಳಿದ್ದಾರೆ.
ಈಡನ್ ಗಾರ್ಡನ್ ಟೆಸ್ಟ್ ಪಂದ್ಯವನ್ನು ಭಾರತ 178 ರನ್ ಗಳಿಂದ ಗೆದ್ದು 2-0 ಅಂತರದಲ್ಲಿ ಮುಂದಿದೆ. ಐಸಿಸಿ ರ್ಯಾಂಕಿಂಗ್ ಪಟ್ಟಿಯಲ್ಲಿ ನಂಬರ್ ಒನ್ ಸ್ಥಾನ ಗಳಿಸಿದೆ. ಮೂರನೇ ಮತ್ತು ಅಂತಿಮ ಪಂದ್ಯ ಇಂದೋರ್ ನಲ್ಲಿ ಇಂದು ಆರಂಭವಾಗಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Narendra Modiನರೇಂದ್ರ ಮೋದಿKolkataVirat Kohliವಿರಾಟ್ ಕೊಹ್ಲಿಈಡನ್ ಗಾರ್ಡನ್ಸ್ವಚ್ಛ ಭಾರತಕೋಲ್ಕತ್ತಾEden GardenSwachcha Bharat
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


