ಕುಸ್ತಿಪಟು ನರಸಿಂಗ್ ಯಾದವ್ ಉದ್ದೀಪನಾ ಮದ್ದು ಸೇವನೆ ಪ್ರಕರಣ: ಕೇಸು ದಾಖಲಿಸಿದ ಸಿಬಿಐ
: ಕುಸ್ತಿಪಟು ನರಸಿಂಗ್ ಯಾದವ್ ಉದ್ದೀಪನಾ ಔಷಧ ಸೇವನೆ ಪ್ರಕರಣ ಸಂಬಂಧ ಸಿಬಿಐ ಕೇಸು ದಾಖಲಿಸಿದೆ...

ಕೊಚ್ಚಿ: ಕುಸ್ತಿಪಟು ನರಸಿಂಗ್ ಯಾದವ್ ಉದ್ದೀಪನಾ ಔಷಧ ಸೇವನೆ ಪ್ರಕರಣ ಸಂಬಂಧ ಸಿಬಿಐ ಕೇಸು ದಾಖಲಿಸಿದೆ.
ಒಲಿಂಪಿಕ್ಸ್ ಆರಂಭಕ್ಕೂ ಮುನ್ನ ನರಸಿಂಗ್ ಯಾದವ್ ಉದ್ದೀಪನಾ ಮದ್ದು ಸೇವನೆ ಆರೋಪದಿಂದಾಗಿ ಒಲಂಪಿಕ್ಸ್ ನಲ್ಲಿ ಪಾಲ್ಗೋಳ್ಳಲು ಸಾಧ್ಯವಾಗಿರಲಿಲ್ಲ. ಐಪಿಸಿ ಸೆಕ್ಷನ್ 120-ಬಿ, 328 ಹಾಗೂ 506 ಸೆಕ್ಷನ್ ಅಡಿಯಲ್ಲಿ ದೂರು ದಾಖಲಿಸಿಕೊಳ್ಳಲಾಗಿದೆ
ಪ್ರಕರಣ ಕುರಿತಂತೆ ಹರ್ಯಾಣ ಪೊಲೀಸರು ಎಫ್ ಐಆರ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದರು. ಆದರೆ ನರಸಿಂಗ್ ಯಾದವ್ ಸಿಬಿಐ ತನಿಖೆ ನಡೆಸುವಂತೆ ಪಟ್ಟು ಹಿಡಿದಿದ್ದರು. ತಮಗೆ ಆಗದವರು ತಮ್ಮ ವಿರುದ್ಧ ಪಿತೂರಿ ನಡೆಸಿದ್ದಾರೆ. ತಮ್ಮ ಜ್ಯೂನಿಯರ್ ಕುಸ್ತಿಪಟು ಆಹಾರದಲ್ಲಿ ಉದ್ದೀಪನಾ ಮದ್ದು ಮಿಶ್ರಣ ಮಾಡಿ ನನಗೆ ನೀಡಿದ್ದಾರೆ ಎಂದು ನರಸಿಂಗ್ ಯಾದವ್ ಆರೋಪಿಸಿದ್ದರು.
ಸಿಬಿಐ ಇಂದಿನಿಂದ ತನಿಖೆ ಆರಂಭಿಸಿದ್ದು, ತಮಗೆ ನ್ಯಾಯ ಸಿಗುತ್ತದೆ, ನಾನು ನಿರಪರಾಧಿ ಎಂದು ಸಾಬೀತಾಗುತ್ತದೆ ಎಂದು ನರಸಿಂಗ್ ಯಾಗವ್ ಭರವಸೆ ವ್ಯಕ್ತ ಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


